The Federal Interview: ಐದು ದಿನ ಕಾಲ ಅಪಾಯಕಾರಿ ಮಳೆ, ಉತ್ತರ ಕನ್ನಡಕ್ಕೆ ʼರೆಡ್‌ ಅಲರ್ಟ್‌ʼ: ಐಎಂಡಿ ನಿರ್ದೇಶಕ ಸಿ.ಎಸ್‌. ಪಾಟೀಲ್‌

ಧಾರವಾಡ, ಬೆಳಗಾವಿ, ಹಾವೇರಿ, ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಹಾಗೂ ಭಾರೀ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮಂಗಳವಾರ (ಮೇ20)ರಿಂದ ಮಳೆ ಪ್ರಮಾಣ ಕಡಿಮೆಯಾಗಿದ್ದು ಮುಂದಿನ ನಾಲ್ಕೈದು ದಿನಗಳ ಕಾಲ ಹಗುರ ಮಳೆಯಾಗಲಿದೆ.;

Update: 2025-05-21 14:08 GMT

ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ವ್ಯಾಪಕ ಮಳೆಯಾಗಲಿದ್ದು ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಯಲ್ಲಿ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ನಿರ್ದೇಶಕರಾದ ಸಿ.ಎಸ್‌. ಪಾಟೀಲ್‌ ತಿಳಿಸಿದ್ದಾರೆ.

ʼದ ಪೆಢರಲ್‌ ಕರ್ನಾಟಕದʼ ಜತೆ ನಡೆದ ಸಂದರ್ಶನದಲ್ಲಿ ಮಾತನಾಡಿದ ಅವರು, ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

Full View

ಧಾರವಾಡ, ಬೆಳಗಾವಿ, ಹಾವೇರಿ, ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಹಾಗೂ ಭಾರೀ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮಂಗಳವಾರ (ಮೇ20)ರಿಂದ ಮಳೆ ಪ್ರಮಾಣ ಕಡಿಮೆಯಾಗಿದ್ದು ಮುಂದಿನ ನಾಲ್ಕೈದು ದಿನಗಳ ಕಾಲ ಹಗುರ ಮಳೆಯಾಗಲಿದೆ. ಪ್ರಸ್ತುತ ವಾಡಿಕೆಗಿಂತ ಹೆಚ್ಚು ಮಳೆಯಾಗಿದ ಗಾಳಿ, ಗುಡುಗು, ಸಿಡಿಲು ಹೆಚ್ಚಾಗಿರುವುದರಿಂದ ಅಪಾಯಕಾರಿ ಮಳೆ ಬೀಳಲಿದೆ ಎಂದು ತಿಳಿಸಿದರು.

‌ವ್ಯಾಪಕ ಮಳೆಯಾಗುವ ಸಂದರ್ಭಗಳಲ್ಲಿ ಸಾರ್ವಜನಿಕರು ಮುಂಜಾಗ್ರತಾ ಕ್ರಮವಹಿಸಬೇಕು. ಮರಗಳ ಕೆಳಗಡೆ ನಿಲ್ಲಬಾರದು, ಮಳೆ ಬರುವ ಸಂದರ್ಭದಲ್ಲಿ ಹೊರಗಡೆ ಓಡಾಡುವಾಗ ಎಚ್ಚರಿಕೆಯಿಂದ ಇರಬೇಕು. ಈ ಕುರಿತು ಪ್ರತಿನಿತ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ಕೇಂದ್ರಗಳಿಗೆ ಮಾಹಿತಿ ನೀಡಲಾಗುತ್ತಿದೆ ಎಂದರು. 

Tags:    

Similar News