ರಾಜ್ಯದಲ್ಲಿ ಡಿ.13-14ರಂದು ಭಾರೀ ಮಳೆ, ಹವಾಮಾನ ಇಲಾಖೆ ಎಚ್ಚರಿಕೆ!
ಬೆಂಗಳೂರಿನಲ್ಲಿ ಶುಕ್ರವಾರ ಮುಂಜಾನೆಯಿಂದಲೇ ಹನಿ ಹನಿ ಮಳೆ ಶುರುವಾಗಿದೆ. ಮೋಡ ಮುಸುಕಿದ ವಾತಾವರಣದಿಂದ ಸಂಪೂರ್ಣ ಕತ್ತಲು ಆವರಿಸಿದೆ. ಮಧ್ಯಾಹ್ನ ವೇಳೆಗೆ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ.;
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರಿನಲ್ಲಿ ಶುಕ್ರವಾರ ನಿರಂತರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿತ್ರದುರ್ಗ, ತುಮಕೂರು ಮತ್ತು ರಾಮನಗರ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಿಗೆ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಶುಕ್ರವಾರ ಮುಂಜಾನೆಯಿಂದಲೇ ಹನಿ ಹನಿ ಮಳೆ ಶುರುವಾಗಿದೆ. ಮೋಡ ಮುಸುಕಿದ ವಾತಾವರಣದಿಂದ ಸಂಪೂರ್ಣ ಕತ್ತಲು ಆವರಿಸಿದೆ. ಮಧ್ಯಾಹ್ನ ವೇಳೆಗೆ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ. ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ ಇಂದು ಮಳೆಯಾಗಬಹುದು ಎನ್ನಲಾಗಿದೆ. ನಗರದ ಕೆಲ ಭಾಗಗಳಲ್ಲಿಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕಳೆದೊಂದು ವಾರದಿಂದ ಚೆನ್ನೈ, ಮಧುರೈ ಸೇರಿದಂತೆ ತಮಿಳುನಾಡಿನ ಕರಾವಳಿ ಜಿಲ್ಲೆಗಳು, ಆಂಧ್ರ ಪ್ರದೇಶ ಕರಾವಳಿ ಜಿಲ್ಲೆಗಳಲ್ಲಿ ಮತ್ತು ಕರ್ನಾಟಕ ಒಂದೆರಡು ಜಿಲ್ಲೆಗಳಲ್ಲಿ ಕೆಲವು ದಿನಗಳಿಂದ ಭಾರೀ ಮಳೆ ಆಗುತ್ತಿದೆ. ಮುಂದಿನ ಮೂರು ದಿನ ಇದೇ ರೀತಿ ಮಬ್ಬ ವಾತಾವರಣ, ಚಳಿ ಗಾಳಿ, ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.