ರಾಜ್ಯದಲ್ಲಿ ಸೆ.5ರವರೆಗೆ ಭಾರೀ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಕನ್ನಡ ಜಿಲ್ಲೆಗೆ ಶನಿವಾರ ಮತ್ತು ಭಾನುವಾರಕ್ಕೆ ಆರೆಂಜ್ ಅಲರ್ಟ್ ಮತ್ತು ಆಗಸ್ಟ್ 30 ರಿಂದ ಸೆಪ್ಟೆಂಬರ್ 3 ರವರೆಗೆ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.;

Update: 2025-08-30 06:07 GMT

ಭಾರೀ ಮಳೆ

ರಾಜ್ಯದಲ್ಲಿ ಸೆ.5ರವರೆಗೂ ಭಾರೀ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆಯು ರೆಡ್ ಮತ್ತು ಆರೆಂಜ್ ಅಲರ್ಟ್‌ ಘೋಷಿಸಿದೆ.

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಹಲವು ತಾಲೂಕುಗಳಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮತ್ತು ಭಾನುವಾರ ಆರೆಂಜ್ ಅಲರ್ಟ್ ಮತ್ತು ಆಗಸ್ಟ್ 30 ರಿಂದ ಸೆಪ್ಟೆಂಬರ್ 3 ರವರೆಗೆ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮತ್ತು ಹೊನ್ನಾವರ ತಾಲೂಕುಗಳಲ್ಲಿ ಭಾರೀ ಮಳೆಯಿಂದಾಗಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಶನಿವಾರ ರಜೆ ನೀಡಲಾಗಿದೆ.

ಮಲೆನಾಡು ಭಾಗದಾದ್ಯಂತ ಮಳೆ ಹೆಚ್ಚಾಗಿದ್ದರಿಂದ ಕಳಸಾ, ಮೂಡಿಗೆರೆ, ಶೃಂಗೇರಿ, ಎನ್‌ಆರ್ ಪುರ, ಚಿಕ್ಕಮಗಳೂರು ಮತ್ತು ತರೀಕೆರೆ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Tags:    

Similar News