ಬೆಂಗಳೂರಿನಲ್ಲಿ ಧಾರಾಕಾರ ಮಳೆ: ರಾಜಾಜಿನಗರದಲ್ಲಿ ಭಾರಿ ಹಾನಿ; 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
x

ಮರ ಬಿದ್ದಿರುವುದು

ಬೆಂಗಳೂರಿನಲ್ಲಿ ಧಾರಾಕಾರ ಮಳೆ: ರಾಜಾಜಿನಗರದಲ್ಲಿ ಭಾರಿ ಹಾನಿ; 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಪೀಟರ್ ಅವರ ಮನೆಗೆ ಬಂದಿದ್ದ ಕಾರೊಂದು ಸಂಪೂರ್ಣವಾಗಿ ಜಖಂಗೊಂಡಿದೆ. ಮಳೆ ನಿಂತ ಬಳಿಕ ಬಿಬಿಎಂಪಿ ಮತ್ತು ಸಂಬಂಧಪಟ್ಟ ಇಲಾಖೆಗಳ ಸಿಬ್ಬಂದಿ ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ.


ಬೆಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ವಿರಾಮ ನೀಡಿದ್ದ ಮಳೆ, ಬುಧವಾರ ರಾತ್ರಿ ಮತ್ತೆ ಅಬ್ಬರಿಸಿದೆ. ನಗರದಾದ್ಯಂತ ಸುರಿದ ಭಾರಿ ಮಳೆಗೆ ಹಲವೆಡೆ ಮರಗಳು ಧರೆಗುರುಳಿ, ವಾಹನಗಳು ಮತ್ತು ಮನೆಗಳಿಗೆ ಹಾನಿಯಾಗಿದೆ.

ರಾಜಾಜಿನಗರ, ಪುಲಕೇಶಿನಗರ, ವಿಲ್ಸನ್ ಗಾರ್ಡನ್ ಸೇರಿದಂತೆ 15ಕ್ಕೂ ಹೆಚ್ಚು ಕಡೆಗಳಲ್ಲಿ ಮರಗಳು ಬಿದ್ದಿವೆ.

ರಾಜಾಜಿನಗರದಲ್ಲಿ ಭಾರೀ ಹಾನಿ

ರಾಜಾಜಿನಗರ 4ನೇ ಬ್ಲಾಕ್‌ನಲ್ಲಿ ಬೃಹತ್ ಮರವೊಂದು ಬುಡಸಮೇತ ಉರುಳಿದ್ದು, ಐದು ಕಾರುಗಳು, ಒಂದು ಟಾಟಾ ಏಸ್ ಗೂಡ್ಸ್ ವಾಹನ ಮತ್ತು ಮೂರರಿಂದ ನಾಲ್ಕು ಬೈಕ್‌ಗಳು ಜಖಂಗೊಂಡಿವೆ. ಇದೇ ಪ್ರದೇಶದಲ್ಲಿ ಚಂದ್ರಮ್ಮ ಮತ್ತು ಪೀಟರ್ ಎಂಬುವವರ ಮನೆಗಳ ಮೇಲೆ ಮರ ಬಿದ್ದ ಪರಿಣಾಮ, ಕುಟುಂಬದ ಸದಸ್ಯರು ಮನೆಯಿಂದ ಹೊರಬರಲಾಗದೆ ತೊಂದರೆ ಅನುಭವಿಸಿದ್ದಾರೆ.

ಪೀಟರ್ ಅವರ ಮನೆಗೆ ಬಂದಿದ್ದ ಕಾರೊಂದು ಸಂಪೂರ್ಣವಾಗಿ ಜಖಂಗೊಂಡಿದೆ. ಮಳೆ ನಿಂತ ಬಳಿಕ ಬಿಬಿಎಂಪಿ ಮತ್ತು ಸಂಬಂಧಪಟ್ಟ ಇಲಾಖೆಗಳ ಸಿಬ್ಬಂದಿ ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ.

ಹಲವೆಡೆ ಜಲಾವೃತ

ಸುಂಕದಕಟ್ಟೆ ಸೇರಿದಂತೆ ನಗರದ ಕೆಲವು ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿ, ನಿವಾಸಿಗಳು ಅದನ್ನು ಹೊರಹಾಕಲು ಹರಸಾಹಸ ಪಡುವಂತಾಗಿದೆ. ರಸ್ತೆಗಳಲ್ಲಿ ನೀರು ತುಂಬಿ ಸಂಚಾರಕ್ಕೆ ಅಡಚಣೆಯಾಗಿದೆ. ಬಿಬಿಎಂಪಿ ಸಿಬ್ಬಂದಿ ತೆರವು ಕಾರ್ಯಗಳನ್ನು ನಿಧಾನವಾಗಿ ಆರಂಭಿಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಮತ್ತೆ ಮಳೆ ಅಬ್ಬರ, 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕಳೆದ ಕೆಲವು ದಿನಗಳ ಕಾಲ ಬಿಡುವು ನೀಡಿದ್ದ ಮಳೆ ಇದೀಗ ಮತ್ತೆ ರಾಜ್ಯಾದ್ಯಂತ ಚುರುಕುಗೊಂಡಿದೆ. ಮುಂದಿನ ದಿನಗಳಲ್ಲಿ ಮಂಡ್ಯ, ಮೈಸೂರು, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈ 8 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

Read More
Next Story