ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಇನ್ನೂ 5 ದಿನ ಭಾರೀ ಮಳೆ
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಅಲ್ಲದೆ, ಅಕ್ಟೋಬರ್ 27ರವರೆಗೆ ಕರಾವಳಿ ಕರ್ನಾಟಕ ಭಾಗದಲ್ಲಿ ಭಾರೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಸಮುದ್ರ ತೀರಗಳಿಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.
ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ.
ಬಂಗಾಳಕೊಲ್ಲಿ ಮತ್ತು ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಮುಂದಿನ ಐದು ದಿನಗಳವರೆಗೆ ಕಾಲ ರಾಜಧಾನಿ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಗೆ ಆರೆಂಜ್ ಅಲರ್ಟ್, ಮೀನುಗಾರರಿಗೆ ಎಚ್ಚರಿಕೆ
ಇಂದು ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಭಾಗಗಳಲ್ಲಿ ಭಾರೀ ಗಾಳಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಅಲ್ಲದೆ, ಅಕ್ಟೋಬರ್ 27ರವರೆಗೆ ಕರಾವಳಿ ಕರ್ನಾಟಕ ಭಾಗದಲ್ಲಿ ಭಾರೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಸಮುದ್ರ ತೀರಗಳಿಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಭಾರೀ ಮಳೆ ನಿರೀಕ್ಷೆ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದು ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಬಾಗಲಕೋಟ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಅಕ್ಟೋಬರ್ 30ರ ವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.