Rain Alert | ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಇನ್ನೆರಡು ದಿನ ಮಳೆ
ಸೋಮವಾರ ಕೂಡ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.;
By : The Federal
Update: 2025-03-24 04:59 GMT
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಸೋಮವಾರ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಮಗಳೂರು, ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ತುಂತುರು ಮಳೆ ಆಗಬಹುದು ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಲ್ಲಿ ಮಂಗಳವಾರ ಹಾಗೂ ಬುಧವಾರವೂ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯಾಗಬಹುದು ಎಂದು ಇಲಾಖೆ ತಿಳಿಸಿದೆ.
ವಿಜಯನಗರ, ತುಮಕೂರು, ಶಿವಮೊಗ್ಗ ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ವಿಜಯಪುರ, ಹಾವೇರಿ, ಗದಗ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಇಲಾಖೆ ಹೇಳಿದೆ.