Heavy Rain| ರಾಜ್ಯದ 15 ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆ

ಮುಂದಿನ 5 ದಿನಗಳ ಕಾಲ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.;

Update: 2025-05-17 05:35 GMT

ರಾಜ್ಯದಲ್ಲಿ ಭಾರೀ ಮಳೆಯಾಗಿದೆ. 

ಅಂಡಮಾನ್ ಮತ್ತು ಬಂಗಾಳ ಕೊಲ್ಲಿಯಲ್ಲಿ ಶಕ್ತಿ ಚಂಡಮಾರುತ ಹಿನ್ನೆಲೆ ಹಲವೆಡೆ ಭಾರೀ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯಪುರ ಜಿಲ್ಲೆಗಳಿಗೆ ಭಾರೀ ಮಳೆಯ ಅಲರ್ಟ್​ ನೀಡಲಾಗಿದೆ.

ಇದೇ ವೇಳೆ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Tags:    

Similar News