Actor Darshan Case | ಸಹಾಯ ಕೋರಿ ಡಿಸಿಎಂಭೇಟಿ ಮಾಡಿದ ದರ್ಶನ್‌ ಪತ್ನಿ ವಿಜಯಲಕ್ಷ್ಮೀ

ದರ್ಶನ್ ಪ್ರಕರಣದ ಕುರಿತು ಕಾನೂನು ಚೌಕಟ್ಟಿನಲ್ಲಿ ಸಹಾಯ ಮಾಡಲು ವಿಜಯಲಕ್ಷ್ಮೀ ಮನವಿ ಮಾಡಿಕೊಂಡಿದ್ದಾರೆ. ‘ದರ್ಶನ್ ಜೈಲಿಗೆ ಹೋಗಿ ತಿಂಗಳಾಗಿದೆ, ಇನ್ನೂ ಬೇಲ್​ ಸಿಕ್ಕಿಲ್ಲ. ಕಾನೂನಿ ಅಡಿಯಲ್ಲಿ ಏನಾದರೂ ಸಹಾಯ ಮಾಡಿ’ ಎಂದು ವಿಜಯಲಕ್ಷ್ಮೀ ಮನವಿ ಮಾಡಿದ್ದಾರೆ ಎನ್ನಲಾಗಿದೆ.

Update: 2024-07-24 08:06 GMT
ನಟ ದರ್ಶನ್‌

ದರ್ಶನ್‌ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲ ಪೋಸ್ಟ್‌ಗಳನ್ನು ಮಾಡುತ್ತಿದ್ದ ಎಂಬ ಕಾರಣಕ್ಕಾಗಿ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿದ ಆರೋಪದ ಮೇಲೆ ಜೈಲು ಸೇರಿರುವ ನಟ ದರ್ಶನ್‌ ಹಾಗೂ ಗ್ಯಾಂಗ್‌ ಕಳೆದ ಒಂದು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಪ್ರಕರಣದ ಹಿನ್ನೆಲೆಯಲ್ಲಿ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಬುಧವಾರ ಬೆಳಿಗ್ಗೆ (ಜು.24) ಭೇಟಿ ಮಾಡಿದ್ದಾರೆ. ದರ್ಶನ್​ ಸಹೋದರ ದಿನಕರ್ ತೂಗುದೀಪ್ ಹಾಗೂ ವಿಜಯಲಕ್ಷ್ಮಿ, ನಿರ್ದೇಶಕ ಜೋಗಿ ಪ್ರೇಮ್ ಅವರು ಬೆಂಗಳೂರಿನ ಸದಾಶಿವ ನಗರದ ಡಿ ಕೆ ಶಿವಕುಮಾರ್ ಮನೆಗೆ ತೆರಳಿ ಮಾತುಕತೆ ನಡೆಸಿದ್ದಾರೆ.

ದರ್ಶನ್ ಪ್ರಕರಣದ ಕುರಿತು ಕಾನೂನು ಚೌಕಟ್ಟಿನಲ್ಲಿ ಸಹಾಯ ಮಾಡಲು ವಿಜಯಲಕ್ಷ್ಮೀ ಮನವಿ ಮಾಡಿಕೊಂಡಿದ್ದಾರೆ. ‘ದರ್ಶನ್ ಜೈಲಿಗೆ ಹೋಗಿ ತಿಂಗಳಾಗಿದೆ, ಇನ್ನೂ ಬೇಲ್​ ಸಿಕ್ಕಿಲ್ಲ. ಕಾನೂನಿನ ಅಡಿಯಲ್ಲಿ ಏನಾದರೂ ಸಹಾಯ ಮಾಡಿ’ ಎಂದು ವಿಜಯಲಕ್ಷ್ಮೀ ಅವರು ಉಪಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. 

ಇನ್ನು ಮಂಗಳವಾರ (ಜು.23) ರಾಮನಗರದಲ್ಲಿ ಅದ್ಧೂರಿಯಾಗಿ ಚಾಮುಂಡಿ ಉತ್ಸವವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಿನಿಮಾ ತಾರೆಯರು ಆಗಮಿಸಿದ್ದರು. ಇದೇ ವೇಳೆ ಮುಖ್ಯ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕೂಡ ಆಗಮಿಸಿದ್ದರು. ವೇದಿಕೆ ಮೇಲೆ ಡಿಕೆಶಿ ಮಾತು ಆರಂಭಿಸುತ್ತಿದ್ದಂತೆ ಅಭಿಮಾನಿಗಳು ಡಿ ಬಾಸ್ ಅಂತ ಘೋಷಣೆ ಹಾಕುವುದಕ್ಕೆ ಶುರು ಮಾಡಿದ್ದರು. ಈ ವೇಳೆ ಮಾತನಾಡಿದ ಡಿ.ಕೆ ಶಿವಕುಮಾರ್‌ ‘ದರ್ಶನ್ ಪತ್ನಿ ಭೇಟಿಗೆ ಅವಕಾಶ ಕೇಳಿದ್ದಾರೆ. ಬುಧವಾರ (ಜುಲೈ 24) ಅವರನ್ನು ಭೇಟಿ ಮಾಡುತ್ತೇನೆ’ ಎಂದು ಡಿಕೆಶಿ ಹೇಳಿದ್ದರು. ಅದೇ ರೀತಿ ದರ್ಶನ್ ಪತ್ನಿ ವಿಜಯಲಕ್ಷ್ಮಿ, ದರ್ಶನ್​ ಸಹೋದರ ದಿನಕರ್ ಹಾಗೂ  ಅವರು ಇಂದು ಡಿಕೆಶಿ ಮನೆಗೆ ತೆರಳಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಪ್ರಕಣಕ್ಕೆ ಸಂಬಂಧಿಸಿದಂತೆ ಕಳೆದ ಒಂದೂವರೆ ತಿಂಗಳಿನಿಂದ ನಟ ದರ್ಶನ್‌ ಪರಪ್ಪನ ಅಗ್ರಹಾರದಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ.

Tags:    

Similar News