ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನೆ ಸಾಧ್ಯತೆ

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಕೆಳನ್ಯಾಯಾಲಯ ನೀಡಿರುವ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ ಮಾಡಲು ಅವಕಾಶ ಇದೆ.;

Update: 2025-08-02 13:41 GMT

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ ಮಾಡಲು ಅವಕಾಶ ಇದೆ. 

ಸುಧೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯದ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಕೆಳ ನ್ಯಾಯಾಲಯ ನೀಡಿದ ತೀರ್ಪನ್ನು ಪ್ರಜ್ವಲ್‌ ರೇವಣ್ಣ ಪರ ವಕೀಲರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ ಮಾಡಲಿದ್ದಾರೆ.ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು ಕೈ ಸೇರಿದ ಬಳಿಕ ಮತ್ತೊಮ್ಮೆ ಅವಲೋಕಿಸಿದ ನಂತರವೇ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ ಮಾಡಲಾಗುತ್ತದೆ.

ವಕೀಲರಿಗೆ ಸೋಮವಾರ ತೀರ್ಪಿನ ಪ್ರತಿ ಲಭ್ಯವಾಗುವ ಸಾಧ್ಯತೆ ಇದೆ. ಶನಿವಾರ ಸಂಜೆ ತೀರ್ಪು ಪ್ರಕಟವಾಗಿದ್ದು, ಭಾನುವಾರ ರಜೆ ದಿನವಾಗಿದೆ. ಹೀಗಾಗಿ ಸೋಮವಾರ ತೀರ್ಪಿನ ಪ್ರತಿ ಸಿಗಲಿದೆ. ಅದನ್ನು ಹಿರಿಯ ವಕೀಲರೊಂದಿಗೆ ಪ್ರಜ್ವಲ್‌ ರೇವಣ್ಣ ಕುಟುಂಬದವರು ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ. ಹೀಗಾಗಿ ಹೈಕೋರ್ಟ್‌ ಮೆಟ್ಟಿಲೇರಲು 2-3 ದಿನಗಳ ಕಾಲಾವಕಾಶ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 

ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಸಂಬಂಧ ದ ಫೆಡರಲ್‌ ಕರ್ನಾಟಕ ಜತೆ ಮಾತನಾಡಿದ ಹೈಕೋರ್ಟ್‌ ವಕೀಲರಾದ ಸ್ವಾಮಿನಿ ಗಣೇಶ್‌,  ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣ ಪರ ವಕೀಲರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಪ್ರಶ್ನಿಸುವ ಅವಕಾಶ ಇದೆ. ಶಿಕ್ಷೆಗೆ ತಡೆ ತರುವ ಸಂಬಂಧ ಅರ್ಜಿ ಸಲ್ಲಿಕೆ ಮಾಡಬಹುದು. ಒಂದು ವೇಳೆ ಶಿಕ್ಷೆಗೆ ತಡೆ ತಂದರೂ ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ. ನ್ಯಾಯಾಲಯವು ಗಂಭೀರ ಪ್ರಕರಣವಾಗಿರುವ ಕಾರಣ ಜಾಮೀನು ಸಿಗುವುದು ಕಷ್ಟಕರ ಎಂದು ಹೇಳಿದರು. 

Tags:    

Similar News