ಭಾರಿ ಮಳೆಯಿಂದ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ

ಭಾರೀ ಮಳೆಯಿಂದಾಗಿ ಆಗುಂಬೆಯಲ್ಲಿ ಲಘು ಪ್ರಮಾಣದಲ್ಲಿ ಗುಡ್ಡ ಕುಸಿದಿದ್ದು, ವಾಹನ ಸಂಚಾರ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿದ್ದು, ಮಣ್ಣು ತೆರವು ಕಾರ್ಯ ಆರಂಭವಾಗಿದೆ.

Update: 2024-07-14 06:24 GMT
ಭಾರೀ ಮಳೆಗೆ ಆಗೊಂಬೆಯ ಗುಡ್ಡ ಕುಸಿತಗೊಂಡಿದೆ.
Click the Play button to listen to article

ಮಲೆನಾಡಿನಲ್ಲಿ ನೈಋತ್ಯ ಮುಂಗಾರು ಮಳೆಯಿಂದಾಗಿ ಕರಾವಳಿ ಮತ್ತು ಮಳೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ  ಪರಿಣಾಮ ಕರಾವಳಿ-ಮಲೆನಾಡು ಸಂಪರ್ಕಿಸುವ ಆಗುಂಬೆ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತವಾಗಿದೆ.

ಶಿವಮೊಗ್ಗ ಮತ್ತು ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯ ಆಗುಂಬೆ ಘಾಟಿಯ 4ನೇ ತಿರುವಿನಲ್ಲಿ ಗುಡ್ಡ ಕುಸಿದಿದೆ. ಹೀಗಾಗಿ ವಾಹನ ಚಾಲಕರು ಎಚ್ಚರಿಕೆಯಿಂದ ಸಂಚರಿಸಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ. ಗುಡ್ಡ ಮತ್ತಷ್ಟು ಕುಸಿದರೆ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿದ್ದು, ಮಣ್ಣು ತೆರವು ಕಾರ್ಯ ಆರಂಭವಾಗಿದೆ. 

ಭಾರೀ ವಾಹನಗಳ ಸಂಚಾರ ನಿಷೇಧ

ಈಗಾಗಲೇ ಈ ಹೆದ್ದಾರಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಈ ಕುರಿತು ಆದೇಶ ಹೊರಡಿಸಿದ್ದಾರೆ. ಜೂನ್ 27 ರಿಂದ ಸೆಪ್ಟೆಂಬರ್ 15ರವರೆಗೆ ಆಗುಂಬೆ ಘಾಟ್ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಬದಲಿ ಮಾರ್ಗವನ್ನು ಸಹ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ-169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟ್‌ನಲ್ಲಿ ಭಾರೀ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿ ಭೂಕುಸಿತ ಆಗುವ ಸಂಭವ ಇರುವುದರಿಂದ ಭಾರೀ ವಾಹನ ಸಂಚಾರ ನಿಷೇಧಿಸಿದೆ. ಆದ್ದರಿಂದ ಲಘು ವಾಹನಗಳು ಮಾತ್ರ ಈಗ ಸಂಚಾರ ನಡೆಸುತ್ತಿವೆ.

ಹೀಗಾಗಿ ತೀರ್ಥಹಳ್ಳಿ-ಉಡುಪಿ ಮಾರ್ಗವಾಗಿ ಹೋಗುವ ವಾಹನಗಳು ಹುಲಿಕಲ್‌ ಘಾಟಿ ಮಾರ್ಗವಾಗಿ ಸಂಚರಿಸುತ್ತಿವೆ. 3 ವರ್ಷಗಳ ಹಿಂದೆ ಈ ಘಾಟಿಯಲ್ಲಿ ಗುಡ್ಡ ಕುಸಿದು ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿತ್ತು. ಸದ್ಯ ರಸ್ತೆಗೆ ಬಿದ್ದಿರುವ ಮಣ್ಣು ತೆರವುಗೊಳಿಸಲಾಗುತ್ತಿದೆ.

Tags:    

Similar News