ಒಳಮೀಸಲಾತಿಯ ಶಿಫಾರಸುಗಳ ಐತಿಹಾಸಿಕ ವರದಿ
ಹೆಚ್.ಎನ್.ನಾಗಮೋಹನ್‌ದಾಸ್ ಅವರ ಆಯೋಗವು ಶಿಫಾರಸುಗಳ ಐತಿಹಾಸಿಕ ವರದಿಯನ್ನು ಮುಖ್ಯಮಂತ್ರಿಗಳಿಗೆ ಒಪ್ಪಿಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು.;
By : The Federal
Update: 2025-08-04 13:04 GMT
ಗೃಹ ಸಚಿವ ಡಾ.ಜಿ. ಪರಮೇಶ್ವರ್
ಒಳಮೀಸಲಾತಿ ಕಲ್ಪಿಸಲು ಸರ್ಕಾರವು ರಚನೆ ಮಾಡಿದ್ದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್‌ದಾಸ್ ಅವರ ಆಯೋಗವು ಶಿಫಾರಸುಗಳ ಐತಿಹಾಸಿಕ ವರದಿಯನ್ನು ಮುಖ್ಯಮಂತ್ರಿಗಳಿಗೆ ಒಪ್ಪಿಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು.
ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಧುನಿಕವಾಗಿ ತಾಂತ್ರಿಕತೆಯನ್ನು ಬಳಸಿಕೊಂಡು ವ್ಯವಸ್ಥಿತವಾದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ವರದಿಯಲ್ಲಿ ಏನೆಲ್ಲ ಅಂಶಗಳಿವೆ ಎಂಬುದು ಗೊತ್ತಿಲ್ಲ.
ವರದಿಯನ್ನು ಮುಂದಿನ ಸಚಿವ ಸಂಪುಟದ ಮುಂದೆ ಇಡಬೇಕು ಎಂದು ಈಗಾಗಲೇ ಸೂಚನೆಯನ್ನು ಕೂಡ ಕೊಟ್ಟಿದ್ದಾರೆ. ಕ್ಯಾಬಿನೆಟ್ ಮುಂದೆ ಬಂದ ಮೇಲೆ ನಮಗೆಲ್ಲ ವಿಷಯಗಳು ಗೊತ್ತಾಗುತ್ತವೆ. ತದನಂತರ ವರದಿ ಅನುಷ್ಠಾನ ಮಾಡುವುದಕ್ಕೆ ಚರ್ಚೆ ಮಾಡಲಾಗುವುದು. ಅದನ್ನು ಸಂಪುಟದಲ್ಲಿ ತೀರ್ಮಾನ ಮಾಡಲಾಗುತ್ತದೆ ಎಂದು ತಿಳಿಸಿದರು.