BANGALORE WATER CRISIS | ಹೋಳಿ ಹಬ್ಬ; ನೀರಿನ ಅಪವ್ಯಯಕ್ಕೆ ಬ್ರೇಕ್

ಬೆಂಗಳೂರು ಜಲ ಮಂಡಳಿಯಿಂದ ನಾಗರಿಕರಿಗೆ ಎಚ್ಚರಿಕೆ

Update: 2024-03-21 10:46 GMT
ಹೋಳಿ ಸಂಭ್ರಮಾಚರಣೆ (ಚಿತ್ರಕೃಪೆ: pexels)

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಮುಂದುವರಿದಿದ್ದು, ಬಣ್ಣದ (ಹೋಳಿ) ಹಬ್ಬಕ್ಕೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಜಲಮಂಡಳಿ) ಕೆಲವು ನಿರ್ದಿಷ್ಟ ಷರತ್ತುಗಳನ್ನು ವಿಧಿಸಿದೆ.

ಮಾರ್ಚ್ 25ರಂದು ಹೋಳಿ ಹಬ್ಬ ಇರುವ ಹಿನ್ನೆಲೆಯಲ್ಲಿ ನೀರನ್ನು ಮಿತವಾಗಿ ಬಳಸುವಂತೆ ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾದ್ ಮನೋಹರ್ ಅವರು ಸುತ್ತೋಲೆ ಹೊರಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಳೆಯ ಅಭಾವದಿಂದಾಗಿ ಅಂತರ್ಜಲ ಮಟ್ಟ ಕುಸಿದಿದ್ದು, ಕೊಳವೆ ಬಾವಿಗಳು ಬತ್ತಿವೆ. ನೀರಿನ ಸಮಸ್ಯೆ ಉಲ್ಬಣವಾಗಿದ್ದು, ನೀರಿನ ಸಮಸ್ಯೆಯನ್ನು ಜಲ ಮಂಡಳಿಯೂ ಸಮರ್ಪಕವಾಗಿ ನಿರ್ವಹಿಸಲು ಎಲ್ಲರ ಸಹಕಾರ ಬಹಳ ಮಹತ್ವದ್ದು ಎಂದಿದ್ದಾರೆ. 

ಅಲ್ಲದೇ ಹೋಳಿ ಹಬ್ಬ ಸಾಂಸ್ಕೃತಿವಾದ ಆಚರಣೆಯ ಹಬ್ಬ. ಈ ಹಬ್ಬವನ್ನು ಜನರು ತಮ್ಮ ಮನೆಗಳಲ್ಲಿ, ವಾಸಸ್ಥಳಗಳಲ್ಲಿ ಆಚರಿಸುವುದಕ್ಕೆ ಯಾವುದೇ ರೀತಿಯ ನಿರ್ಬಂಧ ಇರುವುದಿಲ್ಲ. 


ಸಾಂಸ್ಕೃತಿವಾಗಿ ಆಚರಣೆ ಮಾಡುವುದಕ್ಕೂ ಯಾವುದೇ ನಿಷೇಧ ಹೇರುವುದಿಲ್ಲ. ಆದರೆ, ಹಬ್ಬದ ಸಂದರ್ಭದಲ್ಲಿ ಮನರಂಜನೆ, ವಾಣಿಜ್ಯ ಉದ್ದೇಶಕ್ಕಾಗಿ ರೈನ್ ಡ್ಯಾನ್ಸ್, ಪೂಲ್ ಡ್ಯಾನ್ಸ್ ಆಯೋಜಿಸುವುದು ಸಮಂಜಸವಲ್ಲ. ಇನ್ನು ವಾಣಿಜ್ಯ ಉದ್ದೇಶಕ್ಕಾಗಿ ಹಾಗೂ ಮನರಂಜನೆಗಾಗಿ ಆಯೋಜಿಸುವ ರೈನ್ ಡ್ಯಾನ್ಸ್, ಪೂಲ್ ಡ್ಯಾನ್ಸ್ ಕಾರ್ಯಕ್ರಮಗಳಲ್ಲಿ, ಸಾರ್ವಜನಿಕರ ಹಿತದೃಷ್ಟಿಯಿಂದ ಕಾವೇರಿ ನೀರು ಹಾಗೂ ಬೋರ್‌ವೆಲ್ ನೀರು ಬಳಸಬಾರದು ಎಂದು ಎಚ್ಚರಿಕೆ ನೀಡಿದ್ದಾರೆ. 

Tags:    

Similar News