Cauvery Water| ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವ
ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ ವೀಕ್ಷಿಸಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರ ಜಮಾಯಿಸಿದ್ದು, ಬೆಳಿಗ್ಗೆ 7.40ಕ್ಕೆ ತೀರ್ಥೋದ್ಭವ ಆಯಿತು.
ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಗುರುವಾರ ಪವಿತ್ರ ಬ್ರಹ್ಮಕುಂಡಿಕೆಯಲ್ಲಿ ಕಾವೇರಿ ತೀರ್ಥೋದ್ಭವಾಯಿತು.
ಕಾವೇರಿ ತೀರ್ಥೋದ್ಭವ ಕಣ್ತುಂಬಿಕೊಳ್ಳಲು ಬುಧವರಾ ರಾತ್ರಿಯಿಂದ ಸಾವಿರಾರು ಭಕ್ತರು ತಲಕಾವೇರಿಯಲ್ಲಿ ಜಮಾಯಿಸಿದ್ದರು. ಬೆಳಿಗ್ಗೆ 7.40ಕ್ಕೆ ತೀರ್ಥೋದ್ಭವವಾಗುತ್ತಿದ್ದಂತೆ ಅರ್ಚಕರು ಹಾಗೂ ಭಕ್ತರ ಹರ್ಷೋದ್ಘಾರ ಮುಗಿಲು ಮುಟ್ಟಿತು. ಭಕ್ತರ ಮೇಲೆ ಕಾವೇರಿ ತೀರ್ಥ ಸಂಪ್ರೋಕ್ಷಿಸಲಾಯಿತು.
ತೀರ್ಥೋದ್ಭವ ವೀಕ್ಷಿಸಲು ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗಮಂಡಲದಿಂದ ತಲಕಾವೇರಿವರೆಗೆ ಕಾಲ್ನಡಿಗೆಯಲ್ಲೇ ಬಂದರು. ಕೆಎಸ್‌ಆರ್‌ಟಿಸಿ ಉಚಿತ ಪ್ರಯಾಣದ ಅವಕಾಶ ಸಹ ಕಲ್ಪಿಸಿತ್ತು.
ತೀರ್ಥೋದ್ಭವಕ್ಕೂ ಮುನ್ನ ಬ್ರಹ್ಮಕುಂಡಿಕೆ ಬಳಿ ಪ್ರಶಾಂತ್ ಆಚಾರ್ ನೇತೃತ್ವದಲ್ಲಿ ಪೂಜಕಾ ಕೈಂಕರ್ಯಗಳು ನಡೆದವು. ಮಹಿಳೆಯರು ಸಾಂಪ್ರದಾಯಿಕ ಉಡುಗೆಗಳಲ್ಲಿ ಬಂದು ಕಾವೇರಿ ಮಾತೆಗೆ ಆರತಿ ಬೆಳಗಿದರು. ಭಾಗಮಂಡಲ ಹಾಗೂ ತಲಕಾವೇರಿಯಲ್ಲಿ ಒಂದು ತಿಂಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದ್ದು, ಜನರು ಸಾಗರೋಪಾದಿಯಲ್ಲಿ ಆಗಮಿಸುತ್ತಿದ್ದಾರೆ.