ಧರ್ಮಸ್ಥಳ ಪ್ರಕರಣ: ಹಿರಿಯ ಅಧಿಕಾರಿಗಳೊಂದಿಗೆ ಗೃಹ ಸಚಿವ ಪರಮೇಶ್ವರ್ ಮಹತ್ವದ ಸಭೆ

ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಹಾಗೂ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಶರತ್ ಚಂದ್ರ ಸೇರಿ ಹಲವು ಅಧಿಕಾರಿಗಳೊಂದಿಗೆ ಎಸ್‌ಐಟಿ ತನಿಖೆಯ ಪ್ರಗತಿ ಕುರಿತಂತೆ ಸಮಾಲೋಚನೆ ನಡೆಸಿದರು.;

Update: 2025-08-18 07:43 GMT

ವಿಧಾನಸಭೆ ಅಧಿವೇಶನದಲ್ಲಿ ಧರ್ಮಸ್ಥಳ ಪ್ರಕರಣ ಕುರಿತು ಉತ್ತರ ನೀಡಬೇಕಾಗಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಇಂದು ವಿಧಾನಸೌಧದ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.

ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಹಾಗೂ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಶರತ್ ಚಂದ್ರ ಸೇರಿ ಹಲವು ಅಧಿಕಾರಿಗಳೊಂದಿಗೆ ಎಸ್‌ಐಟಿ ತನಿಖೆಯ ಪ್ರಗತಿ ಕುರಿತಂತೆ ಸಮಾಲೋಚನೆ ನಡೆಸಿದರು.

ಇದಕ್ಕೂ ಮುನ್ನ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದರು.  ಧರ್ಮಸ್ಥಳ ಪ್ರಕರಣ ಸಂಬಂಧ ಗಹನ ಚರ್ಚೆ ನಡೆಸಿ, ತನಿಖೆಯ ಪ್ರಗತಿ ಕುರಿತು ಸದನದಲ್ಲಿ ಮಾಹಿತಿ ನೀಡಲು ತೀರ್ಮಾನಿಸಿದರು.

ಇದೂವರೆಗೆ ಎಸ್‌ಐಟಿ ನಡೆಸಿರುವ ತನಿಖೆಯ ಹಂತಗಳು, ಸಾಧನೆಗಳು ಹಾಗೂ ಮುಂದಿನ ಕ್ರಮಗಳ ಕುರಿತು ಸದನಕ್ಕೆ ವಿವರಿಸಲು ಸರ್ಕಾರ ನಿರ್ಧರಿಸಿದೆ.   

Tags:    

Similar News