Moral Policing: ಮಂಗಳೂರು ಹೋಂ ಸ್ಟೇ ದಾಳಿಯ 40 ಆರೋಪಿಗಳು ದೋಷಮುಕ್ತ
ಮಂಗಳೂರು ನಗರದ ಹೊರವಲಯದ ಪಡೀಲ್‌ನಲ್ಲಿ 2012ರಲ್ಲಿ ನಡೆದಿದ್ದ ಹೋಂ ಸ್ಟೇ ಮೇಲೆ ದಾಳಿ ನಡೆಸಿ, ಅನೈತಿಕ ಪೊಲೀಸ್‌ಗಿರಿ ನಡೆಸಿದ್ದಾರೆನ್ನಲಾದ ಎಲ್ಲ 40 ಮಂದಿ ಆರೋಪಿಗಳನ್ನು ಜಿಲ್ಲಾ 6ನೇ ಸೆಷನ್ಸ್ ಕೋರ್ಟ್ ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.;
ಮಂಗಳೂರು ನಗರದ ಹೊರವಲಯದ ಪಡೀಲ್‌ನಲ್ಲಿ 2012ರಲ್ಲಿ ನಡೆದಿದ್ದ ಹೋಂ ಸ್ಟೇ ಮೇಲೆ ದಾಳಿ ನಡೆಸಿ, ಅನೈತಿಕ ಪೊಲೀಸ್‌ಗಿರಿ ನಡೆಸಿದ್ದಾರೆನ್ನಲಾದ ಎಲ್ಲ 40 ಮಂದಿ ಆರೋಪಿಗಳನ್ನು ಜಿಲ್ಲಾ 6ನೇ ಸೆಷನ್ಸ್ ಕೋರ್ಟ್ ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.
ಪ್ರಕರಣದಲ್ಲಿ ಒಟ್ಟು 44 ಮಂದಿ ಆರೋಪಿಗಳಿದ್ದರು. ಈ ಪೈಕಿ ಮೂವರು ಮೃತಪಟ್ಟಿದ್ದಾರೆ. ಪತ್ರಕರ್ತರೊಬ್ಬರಿಗೆ ಈಗಾಗಲೇ ನ್ಯಾಯಾಲಯ ಜಾಮೀನು ನೀಡಿ, ಪ್ರಕರಣದಿಂದ ಕೈಬಿಟ್ಟಿದೆ. ಮತ್ತೊಬ್ಬ ಬಾಲಕ ಕಾನೂನು ಸಂಘರ್ಷಕ್ಕೆ ಒಳಗಾಗಿದ್ದ. ಆತನನ್ನೂ ಪ್ರಕರಣದಿಂದ ಕೈಬಿಡಲಾಗಿತ್ತು.
ಘಟನೆಯೇನು?
ಪಡೀಲ್‌ನಲ್ಲಿರುವ ಮಾರ್ನಿಂಗ್ ಮಿಸ್ಟ್ ಹೋಂ ಸ್ಟೇಯಲ್ಲಿ 2012ರ ಜುಲೈ 21ರಂದು ಬೇರೆ ಬೇರೆ ಧರ್ಮಗಳಿಗೆ ಸೇರಿದ ಯುವಕ ಯುವತಿಯರು ಹುಟ್ಟುಹಬ್ಬ ಆಚರಣೆ ಮಾಡುತ್ತಿದ್ದರು. ಈ ವೇಳೆ ಹಿಂದೂ ಸಂಘಟನೆಯ ಕಾರ್ಯಕರ್ತರು ದಾಳಿ ನಡೆಸಿದ್ದರು. ಹುಟ್ಟು ಹಬ್ಬ ಆಚರಣೆಯಲ್ಲಿ ಇಬ್ಬರು ಪೊಲೀಸ್ ಉನ್ನತಾಧಿಕಾರಿಯೊಬ್ಬರ ಪುತ್ರಿಯೂ ಇದ್ದರು. ದಾಳಿ ಪ್ರಕರಣ ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿಯಾಗಿ ಚರ್ಚೆಗೊಳಗಾಗಿತ್ತು. ರಾಜಕೀಯ ಆರೋಪ ಪ್ರತ್ಯಾರೋಪಗಳಿಗೂ ಕಾರಣವಾಗಿತ್ತು.
ಪ್ರಕರಣದ ಸಂತ್ರಸ್ತರು ನೀಡಿದ ದೂರಿನ ಮೇಲೆ ತನಿಖೆ ನಡೆದು ಆರೋಪಿಗಳ ಬಂಧನವಾಗಿತ್ತು. ಈ ಪ್ರಕರಣದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನೂ ಆರೋಪಿಗಳನ್ನಾಗಿಸಲಾಗಿತ್ತು.
14ವರ್ಷಗಳ ಕಾಲ ದೀರ್ಘ ವಿಚಾರಣೆ ನಡೆದು ಕೊನೆಗೂ ತೀರ್ಪು ಹೊರಬಿದ್ದಿದೆ.