ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಬೈಕ್ ಸವಾರರ ದುರ್ಮರಣ
ಮೃತ ಯುವಕರನ್ನು ಆಕಾಶ್ ಮತ್ತು ಅಫ್ಜಲ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.;
By : The Federal
Update: 2025-06-03 05:26 GMT
ನಗರದ ಹೃದಯ ಭಾಗದಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೆ.ಆರ್. ಮಾರುಕಟ್ಟೆ ಫ್ಲೈಓವರ್‌ನಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಈ ದುರ್ಘಟನೆ ನಡೆದಿದೆ.
ಮೃತ ಯುವಕರನ್ನು ಆಕಾಶ್ ಮತ್ತು ಅಫ್ಜಲ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಅತಿ ವೇಗ ಮತ್ತು ಅಜಾಗರೂಕ ಚಾಲನೆಯೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಬೈಕ್‌ಗಳು ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ಸವಾರರು ಚಿಮ್ಮಿ ರಸ್ತೆಗೆ ಬಿದ್ದಿದ್ದಾರೆ. ತಲೆಗೆ ಬಲವಾಗಿ ಏಟು ಬಿದ್ದಿದ್ದರಿಂದ ಇಬ್ಬರೂ ಸಾವನ್ನಪ್ಪಿದ್ದಾರೆ. ಮೃತಪಟ್ಟ ಸವಾರರು ಹೆಲ್ಮೆಟ್ ಧರಿಸಿರಲಿಲ್ಲ ಎಂದು ತಿಳಿದುಬಂದಿದೆ.