Lakshmi Hebbalkar | ಅಪಘಾತದಲ್ಲಿ ಗಾಯಗೊಂಡ ಹೆಬ್ಬಾಳ್ಕರ್ ಆರೋಗ್ಯ ಸ್ಥಿತಿ ಸುಧಾರಣೆ
Lakshmi Hebbalkar| ಕಾರು ಅಪಘಾತದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆನ್ನುಹುರಿಗೆ ಪೆಟ್ಟಾಗಿತ್ತು. ಆದಾಗ್ಯೂ ಅವರು ಅಪಾಯದಿಂದ ಪಾರಾಗಿದ್ದರು. ಇದೀಗ ಚಿಕಿತ್ಸೆ ಮುಂದುವರಿದಿದೆ.;
ಕಾರು ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಚೇತರಿಸಿಕೊಳ್ಳುತ್ತಿರುವುದಾಗಿ ವಿಜಯಾ ಆಸ್ಪತ್ರೆ ವೈದ್ಯ ಡಾ.ರವಿ ಪಾಟೀಲ ತಿಳಿಸಿದರು.
ಆಸ್ಪತ್ರೆಗೆ ದಾಖಲಾಗಿರುವ ಸಚಿವರ ಆರೋಗ್ಯ ತಪಾಸಣೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿರುವ ಡಾ.ರವಿ ಪಾಟೀಲ್ , 24 ಗಂಟೆಯಲ್ಲಿಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ಚೇತರಿಕೆ ಕಂಡಿದೆ. ಸಚಿವರ ಬೆನ್ನುಹುರಿ ಪೆಟ್ಟಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿಸಿದರು.
ಲಕ್ಷ್ಮೀ ಹೆಬ್ಬಾಳ್ಕರ್ ಅಪಘಾತ ಆಗಿ ಆಸ್ಪತ್ರೆಗೆ ಬಂದಾಗ ಬಹಳ ಪೆಟ್ಟಾಗಿತ್ತು. ಸಚಿವರಿಗೆ ಬೆನ್ನುಹುರಿ ಪೆಟ್ಟಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಅವರಿಗೆ ಈಗ ವಿಶ್ರಾಂತಿಯ ಅಗತ್ಯವಿದ್ದು, ಇನ್ನು ಮೂರು ದಿನಗಳಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ತಿಳಿಸಿದರು.
ಎರಡನೇ ದಿನ ರಕ್ತದ ಮಾದರಿ ತಪಾಸಣೆ ನಡೆಸಲಾಗಿದೆ. ಹೆಚ್ಚು ಪೌಷ್ಟಿಕಾಂಶವುಳ್ಳ ಆಹಾರ, ಹಣ್ಣು ಸೇವಿಸಲು ಸಲಹೆ ನೀಡಲಾಗಿದೆ. 'ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚೇತರಿಸಿಕೊಂಡಿದ್ದಾರೆ. ಸಿಟಿ ಸ್ಕ್ಯಾನ್ ಮಾಡಿದ್ದೇವೆ. ತಲೆಗೆ ಬಲವಾದ ಪೆಟ್ಟು ಬಿದ್ದ ಕಾರಣ ಮಿದುಳಿಗೆ ಸ್ವಲ್ಪ ಊತ ಬಂದಿದೆ. ಕಾರು ಚಾಲಕ, ಗನ್‌ಮ್ಯಾನ್ ಕೈ, ಭುಜಕ್ಕೆ ಪೆಟ್ಟಾಗಿದ್ದು ಸಮಸ್ಯೆ ಏನೂ ಇಲ್ಲ' ಎಂದು ಅವರು ತಿಳಿಸಿದ್ದಾರೆ.