ಹುಬ್ಬಳ್ಳಿ ವಿದ್ಯಾರ್ಥಿನಿ ಹತ್ಯೆ ಪ್ರಕರಣ| ಆರೋಪಿ ಫಯಾಜ್ ಬಂಧನ
ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಆವರಣದಲ್ಲಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹಿರೇಮಠ (25) ಎನ್ನುವವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆ ಆರೋಪಿ ಫಯಾಜ್‌ನನ್ನು ಬಂಧಿಸಲಾಗಿದೆ.
ಹುಬ್ಬಳ್ಳಿ ನಗರದ ಬಿವಿಬಿ ಕಾಲೇಜಿನ ಆವರಣದಲ್ಲೇ ಕಾಲೇಜಿನ ವಿದ್ಯಾರ್ಥಿ ಹಾಗೂ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ (25) ಎನ್ನುವವರನ್ನು ಗುರುವಾರ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ಫಯಾಜ್ (27) ಎನ್ನುವವ ಕೊಲೆ ಆರೋಪಿ. ನೇಹಾ ಹಾಗೂ ಫಯಾಜ್ ಇಬ್ಬರೂ ಬಿವಿಬಿ ಕಾಲೇಜಿಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು.
ʻಕೊಲೆ ಆರೋಪಿ ಫಯಾಜ್ ಬೆಳಗಾವಿಯ ಸವದತ್ತಿ ತಾಲ್ಲೂಕಿನ ಮುನವಳ್ಳಿ ಗ್ರಾಮದ ನಿವಾಸಿಯಾಗಿದ್ದು, ಕೆಲವು ತಿಂಗಳಿನಿಂದ ಕಾಲೇಜಿಗೆ ಬರುತ್ತಿರಲಿಲ್ಲ. ಆತನನ್ನು ಬಂಧಿಸಲಾಗಿದ್ದು ವಿಚಾರಣೆಗೆ ಒಳಪಡಿಸಲಾಗಿದೆʼ ಎಂದು ವಿದ್ಯಾನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.
ʻ ಫಯಾಜ್ನನ್ನು ಪ್ರೀತಿಸುವಂತೆ ನೇಹಾಗೆ ಹಲವು ದಿನಗಳಿಂದ ಕಾಡುತ್ತಿದ್ದ. ಆಕೆ ಪ್ರೀತಿ ನಿರಾಕರಿಸಿದ್ದರಿಂದ ಕೋಪಗೊಂಡ ಆತ ಗುರುವಾರ ಸಂಜೆ ಕೊಲೆ ಮಾಡಿದ್ದಾನೆ. ನೇಹಾ ಮೇಲೆ ಏಕಾಏಕಿ ಚಾಕುವಿನಿಂದ ದಾಳಿ ಮಾಡಲಾಗಿದ್ದು, ಕುತ್ತಿಗೆ ಹಾಗೂ ಹೊಟ್ಟೆಯ ಭಾಗಕ್ಕೆ ಹಲವು ಬಾರಿ ಇರಿದಿದ್ದಾನೆ. ಅವರನ್ನು ಕೂಡಲೇ ಸಮೀಪದ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿಸಲಾಗುತ್ತಿತ್ತು. ಆದರೆ, ಮಾರ್ಗ ಮಧ್ಯೆದಲ್ಲೇ ಅವರು ಸಾವನ್ನಪ್ಪಿದ್ದಾರೆʼ ಎಂದು ಪೊಲೀಸರು ಹೇಳಿದ್ದಾರೆ.
ಪ್ರೀತಿ ನಿರಾಕರಿಸಿದ್ದಕ್ಕೆ ಕೊಲೆ
ನೇಹಾ ಹಿರೇಮಠ ಅವರು ಫಯಾಜ್ನನ್ನು ಪ್ರೀತಿಸಲು ನಿರಾಕರಿಸಿದ್ದ ಕಾರಣಕ್ಕಾಗಿಯೇ ಫಯಾಜ್ ಕೊಲೆ ಮಾಡಿದ್ದಾನೆ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿದು ಬಂದಿದೆ. ಆರೋಪಿ ಸವದತ್ತಿ ತಾಲ್ಲೂಕಿನ ಮುನವಳ್ಳಿ ಗ್ರಾಮದ ನಿವಾಸಿಯಾಗಿದ್ದು, ಕೆಲ ತಿಂಗಳಿನಿಂದ ಕಾಲೇಜಿಗೆ ಬರುತ್ತಿರಲಿಲ್ಲ. ಆರೋಪಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ. ಫಯಾಜ್ ಕಾಡುತ್ತಿದ್ದಾನೆ, ಆತನಿಂದ ಸಮಸ್ಯೆ ಆಗುತ್ತಿದೆ ಎಂದು ನೇಹಾ, ಅವರ ತಂದೆ-ತಾಯಿಗೆ ತಿಳಿಸಿದ್ದರು. ನೇಹಾ ತಂದೆ ಪುತ್ರಿಯ ತಂಟೆಗೆ ಬಾರಬೇಡ ಎಂದು ಫಯಾಜ್ಗೆ ಎಚ್ಚರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.