Mysore MUDA Scam| ಲೋಕಾಯುಕ್ತ ತನಿಖೆ ಎದುರಿಸುತ್ತೇನೆ: ಸಿದ್ದರಾಮಯ್ಯ

ನಿಖೆಗೆ ಹೆದುರುವುದಿಲ್ಲ ಹಾಗೂ ಕಾನೂನು ರೀತಿ ಹೋರಾಟ ಮಾಡಲು ತಯಾರಾಗಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಜನ ಪ್ರತಿನಿಧಿಗಳ ನ್ಯಾಯಾಲಯ ಮಂಗಳವಾರ ಆದೇಶ ನೀಡಿದಂತೆ ಭ್ರಷ್ಟಾಚಾರ ನಿಗ್ರಹ ಕಾಯಿದೆಯ ಸೆಕ್ಷನ್‌ 17 ಎ ಪ್ರಕಾರ ತನಿಖೆ ಮಾಡಲು ಅನುಮತಿ ನೀಡಲಾಗಿದೆ. ಆದೇಶದ ಪ್ರತಿ ನನಗೆ ದೊರೆತಿಲ್ಲ.ಆದೇಶವನ್ನು ಪೂರ್ಣವಾಗಿ ಓದಿದ ನಂತರ ಪ್ರತಿಕ್ರಿಯೆ ನೀಡುವೆ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.;

Update: 2024-09-25 10:18 GMT

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣದಲ್ಲಿ ಆರೋಪಿಯಾಗಿ ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಲು ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವ ಬಗ್ಗೆ  ಪ್ರತಿಕ್ರಿಯಿಸಿರುವ  ಮುಖ್ಯಮಂತ್ರಿ ಸಿದ್ದರಾಮಯ್ಯ, ತನಿಖೆಯನ್ನು ಎದುರಿಸಲು ತಯಾರಾಗಿದ್ದೇನೆ ಎಂದು ಹೇಳಿದ್ದಾರೆ.

ವಿಧಾನಸೌಧ ಬಳಿ ಮಾಧ್ಯಮದ ಜತೆ ಮಾತನಾಡಿದ ಸಿದ್ದರಾಮಯ್ಯ,  ತನಿಖೆಗೆ ಹೆದುರುವುದಿಲ್ಲ ಹಾಗೂ ಕಾನೂನು ರೀತಿ ಹೋರಾಟ ಮಾಡಲು ತಯಾರಾಗಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.   ಜನ ಪ್ರತಿನಿಧಿಗಳ ನ್ಯಾಯಾಲಯ ಮಂಗಳವಾರ  ಆದೇಶ ನೀಡಿದಂತೆ ಭ್ರಷ್ಟಾಚಾರ ನಿಗ್ರಹ ಕಾಯಿದೆಯ ಸೆಕ್ಷನ್‌ 17 ಎ ಪ್ರಕಾರ ತನಿಖೆ ಮಾಡಲು ಅನುಮತಿ ನೀಡಲಾಗಿದೆ. ಆದೇಶದ ಪ್ರತಿ ನನಗೆ ದೊರೆತಿಲ್ಲ.ಆದೇಶವನ್ನು ಪೂರ್ಣವಾಗಿ ಓದಿದ ನಂತರ ಪ್ರತಿಕ್ರಿಯೆ ನೀಡುವೆ ಎಂದು ಹೇಳಿದ್ದಾರೆ. 

“ಮಂಗಳವಾರ ಹೇಳಿರುವ ಮಾತುಗಳನ್ನು ಈಗಲೂ ಪುನರುಚ್ಚರಿಸುತ್ತಿದ್ದೇನೆ. ನನಗೆ ತಿಳಿದಂತೆ ಮೈಸೂರು ಲೋಕಾಯುಕ್ತಕ್ಕೆ ಪ್ರಕರಣವನ್ನು ಶಿಫಾರಸ್ಸು ಮಾಡಲಾಗಿದೆ. ಮೈಸೂರಿನಲ್ಲಿಯೇ ದೂರು ನೀಡಲಾಗಿದ್ದು, ದೂರುದಾರರು ಮೈಸೂರಿನವರು, ಮೂಡಾ ಕೂಡ ಅಲ್ಲಿಯೇ ಇರುವುದರಿಂದ ಮೈಸೂರಿಗೆ ಶಿಫಾರಸ್ಸು ಮಾಡಿರಬೇಕು ಎಂದು ಭಾವಿಸಿದ್ದೇನೆ” ಎಂದರು. " ಆದೇಶ ಪ್ರತಿ ಸಿಕ್ಕಿದ ಬಳಿಕ ವಕೀಲರೊಂದಿಗೆ ಚರ್ಚೆ ಮಾಡಿ ಮುಂದಿನ ನಡೆ ಬಗ್ಗೆ  ನಿರ್ಧಾರ ಮಾಡಲಾಗುವುದು," ಎಂದೂ ಅವರು ಹೇಳಿದರು.

ಆಯೋಗದ ತನಿಖೆ ಮುಂದುವರಿಕೆ

ಮುಡಾ ಪ್ರಕರಣದ ತನಿಖೆಗೆ ಸರ್ಕಾರ ರಚಿಸಿದ್ದ ನಿವೃತ್ತ ನ್ಯಾ.ಪಿ.ಎನ್.ದೇಸಾಯಿಯವರ ಆಯೋಗ ಅದರ ತನಿಖೆ ಮುಂದುವರೆಯುತ್ತದೆಯೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ನ್ಯಾಯಾಂಗ ತನಿಖೆ ಮುಂದುವರೆಯುತ್ತದೆ ಎಂದು ಹೇಳಿದ್ದಾರೆ. ಸಂಪೂರ್ಣ ಪ್ರತಿಕ್ರಿಯೆ ನೀಡಲು ನಾನು ಪೂರ್ಣ ಆದೇಶ ಓದಿದ ಮೇಲೆ  ಗುರುವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದರು. 

Tags:    

Similar News