Waqf Asset Issue : ರೈತ ಪರ ಕಾಳಜಿ ಇದ್ದರೆ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದುಮಾಡಿ; ಸಿಎಂಗೆ ಬಸವರಾಜ ಬೊಮ್ಮಾಯಿ ಸವಾಲು
ಅನ್ವರ್ ಮಾಣಿಪ್ಪಾಡಿ ವರದಿಯಲ್ಲಿಉಲ್ಲೇಸಿದಂತೆ ವಕ್ಪ್ ಆಸ್ತಿ ಕಬಳಿಸಿರುವ ಕಾಂಗ್ರೆಸ್ ನಾಯಕರಿಂದ ವಕ್ಪ್ ಆಸ್ತಿ ವಶಕ್ಕೆ ಪಡೆಯಿರಿ ಎಂದು ನಾನು ಒತ್ತಾಯಿಸಿದ್ದೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಅನ್ವರ್ ಮಾಣಿಪ್ಪಾಡಿ ವರದಿಯಲ್ಲಿಉಲ್ಲೇಸಿದಂತೆ ವಕ್ಪ್ ಆಸ್ತಿ ಕಬಳಿಸಿರುವ ಕಾಂಗ್ರೆಸ್ ನಾಯಕರಿಂದ ವಕ್ಪ್ ಆಸ್ತಿ ವಶಕ್ಕೆ ಪಡೆಯಿರಿ ಎಂದುವಕ್ಪ್ ಬೋರ್ಡ್‌ಗೆ ಒತ್ತಾಯಿಸಿದ್ದೇನೆಯೇ ವಿನಃ ರೈತರ ಆಸ್ತಿಯನ್ನಲ್ಲ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ .
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಕ್ಪ್ ಸಚಿವ ಜಮೀರ್ ಅಹಮದ್ ಅವರು ನನ್ನ ಹಳೆಯ ವಿಡಿಯೊ ಬಿಡುಗಡೆ ಮಾಡಿ, ನಾನು ರೈತರ ಜಮೀನು ವಶಪಡಿಸಿಕೊಳ್ಳಲು ವಕ್ಪ್ ಬೋರ್ಡ್‌ಗೆ ಹೇಳಿದ್ದೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ನಾನು ವಕ್ಪ್ ಸಮಾರಂಭದಲ್ಲಿ ಮಾತನಾಡಿದ್ದು ನಿಜ. ಆದರೆ, ವಕ್ಫ್ ಬೋರ್ಡ್‌ಗೆ ಸಂಬಂಧಿಸಿದ ಯಾವುದೇ ಸಭೆ ಮಾಡಿರಲಿಲ್ಲ ಎಂದು ಹೇಳಿದರು.
ನಾನು ಅಂದು ಹೇಳಿರುವುದು ಅನ್ವರ್ ಮಾಣಿಪ್ಪಾಡಿ ಸಮಿತಿ ವರದಿ ಬಗ್ಗೆ. ಕಾಂಗ್ರೆಸ್ ಪಕ್ಷದ ದೊಡ್ಡ ನಾಯಕರು ಮೋಸದಿಂದ ವಕ್ಪ್ ಆಸ್ತಿ ನುಂಗಿದ್ದಾರೋ ಅವರಿಂದ ವಕ್ಫ್ ಆಸ್ತಿ ವಶಪಡಿಸಿಕೊಳ್ಳಿ ಎಂದು ಒತ್ತಾಯಿಸಿದ್ದೆ. ನಾವು ರೈತರಿಗೆ ಯಾವುದೇ ನೊಟಿಸ್ ಕೊಟ್ಟಿರಲಿಲ್ಲ. ರೈತರ ಜಮೀನು ವಶ ಪಡೆದುಕೊಂಡಿಲ್ಲ ಎಂದು ಬೊಮ್ಮಾಯಿ ಹೇಳಿದರು.
ಸಚಿವ ಜಮೀರ್ ಅಹಮದ್ ರೈತರಿಗೆ ನೊಟಿಸ್ ಕೊಡುವ ಮೊದಲು ಕಾಂಗ್ರೆಸ್ ನಾಯಕರು ಎಲ್ಲಿ ವಕ್ಪ್ ಆಸ್ತಿ ನುಂಗಿ ಹಾಕಿದ್ದಾರೋ ಅದನ್ನು ಮೊದಲು ವಶಪಡಿಸಿಕೊಳ್ಳಲಿ ಎಂದು ಬೊಮ್ಮಾಯಿ ಹೇಳಿದರು.
ರೈತರಿಗೆ ಕೊಟ್ಟಿರುವ ನೋಟಿಸ್ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿರುವುದು ʼಹೇಳಿರುವುದು ಕಣ್ಣೊರೆಸುವ ತಂತ್ರ. ನೋಟಿಸ್ ವಾಪಸ್ ಪಡೆದು ಚುನಾವಣೆ ಮುಗಿದ ನಂತರ ಮತ್ತೆ ನೋಟೀಸ್ ಕೊಡುವುದಿಲ್ಲ ಎಂಬುದಕ್ಕೂ ಯಾವುದೇ ಖಾತರಿ ಇಲ್ಲ. ಅದರ ಬದಲು ವಕ್ಪ್ ಕುರಿತ ಗೆಜೆಟ್ ನೋಟಿಫಿಕೇಶ್ ರದ್ದು ಮಾಡುವುದು ಉತ್ತಮ. ಮುಖ್ಯಮಂತ್ರಿಗಳಿಗೆ ರೈತರ ಬಗ್ಗೆ ನೈಜ ಕಾಳಜಿ, ರೈತರ ಆಸ್ತಿ ಉಳಿಸಬೇಕೆಂದಿದ್ದರೆ ಕೂಡಲೆ ವಕ್ಪ್ ಗೆಜೆಟ್ ನೊಟಿಫಿಕೇಶ್ ರದ್ದು ಮಾಡಬೇಕು. ಯಾವುದೇ ರೈತರಿಗೆ ನೋಟಿಸ್ ಕೊಡಬಾರದು ಎಂದು ಆಗ್ರಹಿಸಿದರು.
ನಮ್ಮ ಅವಧಿಯಲ್ಲಿ ಮುಸಲ್ಮಾನರ ಹೆಸರಿನಲ್ಲಿದ್ದ ಆಸ್ತಿಯನ್ನು ಇನ್ಯಾರೊ ಕಬಳಿಸಿರುವುಕ್ಕೆ ನೊಟಿಸ್ ಕೊಟ್ಟಿರಬಹುದು. ನಾವು ರೈತರಿಗೆ ಯಾವುದೇ ನೊಟಿಸ್ ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.