ಬೆಳಗಾವಿ ಜಿಲ್ಲೆಯ ಐಗಳಿ ಎಎಸ್ಐ ಆತ್ಮಹತ್ಯೆಗೆ ಶರಣು
ಬೆಳಗಾವಿ ಜಿಲ್ಲೆಯ ಐಗಳಿ ಪೋಲಿಸ್ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶಂಭು ಮೆತ್ರಿ (50) ಶುಕ್ರವಾರ ರಾತ್ರಿ ಅಥಣಿ ತಾಲೂಕಿನ ಅನಂತಪುರ ಗ್ರಾಮದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ತಿಂಗಳು ಬೆಳಗಾವಿಯಲ್ಲಿ ತಹಶೀಲ್ದಾರ್ ಕೊಠಡಿಯಲ್ಲೇ ಎಸ್ಡಿಎ ನೌಕರ ಆತ್ಮಹತ್ಯೆ ಮಾಡಿಕೊಂಡ ಘಟನೆಯ ಬೆನ್ನಲ್ಲೇ ಅದೇ ಜಿಲ್ಲೆಯ ಐಗಳಿ ಪೋಲಿಸ್ ಠಾಣೆಯ ಎಎಸ್ಐ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಐಗಳಿ ಪೋಲಿಸ್ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶಂಭು ಮೆತ್ರಿ (50) ಶುಕ್ರವಾರ ರಾತ್ರಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಗ್ರಾಮದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಂಭು ಅವರ ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ. ಸ್ಥಳಕ್ಕೆ ಅಥಣಿ ಪೋಲಿಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
ಕಳೆದ ತಿಂಗಳು ಬೆಳಗಾವಿ ತಹಶೀಲ್ದಾರ್ ಕಚೇರಿಯ ಎಸ್ಡಿಎ ನೌಕರ ರುದ್ರೇಶ್ ಯಾದವಣ್ಣನವರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ವರ್ಗಾವಣೆ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ತಹಶೀಲ್ದಾರ್ ಬಸವರಾಜ ನಾಗರಾಳ, ಎ2 ಅಶೋಕ ಕಬ್ಬಲಿಗೇರ್, ಇನ್ನು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸೋಮು ಎ3 ಆರೋಪಿಯಾಗಿದ್ದರು.
ಇದರ ಬೆನ್ನಲ್ಲೇ ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಮತ್ತೋರ್ವ ಸರ್ಕಾರಿ ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದು, ಎಎಸ್ಐ ಆತ್ಮಹತ್ಯೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.