ನಾಗರಹೊಳೆ ಅರಣ್ಯಕ್ಕೆ ಅಕ್ರಮ ಪ್ರವೇಶ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ ಪ್ರಕರಣ ದಾಖಲು
ನಾಗರಹೊಳೆ ವನ್ಯಜೀವಿ ಉಪ ವಿಭಾಗದ ಸಂರಕ್ಷಣಾಧಿಕಾರಿ ಜೆ. ಅನನ್ಯಕುಮಾರ್ ಅವರು ಈ ಸಂಬಂಧ ದೂರು ದಾಖಲಿಸಿದ್ದಾರೆ.;
ಚೇತನ್ ಅಹಿಂಸಾ
ನಾಗರಹೊಳೆ ರಕ್ಷಿತಾರಣ್ಯ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿದ ಆರೋಪದ ಮೇಲೆ ನಟ ಚೇತನ್ ಅಹಿಂಸಾ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊನ್ನಂಪೇಟೆ ತಾಲೂಕಿನ ಕರಡಿಕಲ್ಲು ಅತ್ತೂರು ಕೊಲ್ಲಿ ಹಾಡಿಯಲ್ಲಿ ಆಗಸ್ಟ್ 8ರಂದು ಅರಣ್ಯ ಹಕ್ಕು ಕಾಯಿದೆಯಡಿ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆಗೆ ಬೆಂಬಲ ನೀಡಲು ಅರಣ್ಯ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ನಾಗರಹೊಳೆ ವನ್ಯಜೀವಿ ಉಪ ವಿಭಾಗದ ಸಂರಕ್ಷಣಾಧಿಕಾರಿ ಜೆ. ಅನನ್ಯಕುಮಾರ್ ಅವರು ಈ ಸಂಬಂಧ ದೂರು ದಾಖಲಿಸಿದ್ದಾರೆ. ನಟ ಚೇತನ್ ಅಹಿಂಸಾ, ನ್ಯಾಷನಲ್ ಆದಿವಾಸಿ ಸಂಘಟನೆ ಮುಖ್ಯಸ್ಥ ರಾಯ್ ಡೇವಿಡ್, ರಾಜಾರಾಮ್, ಪತ್ರಕರ್ತೆ ನಿಕಿತಾ ಜೈನ್ ಮತ್ತು ಸರ್ತ ಜಾಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಸಂರಕ್ಷಿತಾರಣ್ಯ ಪ್ರದೇಶದೊಳಗೆ ಅರಣ್ಯ ಇಲಾಖೆಯ ಅನುಮತಿಯಿಲ್ಲದೆ ಪ್ರವೇಶಿಸುವುದು ಅಥವಾ ಯಾವುದೇ ಚಟುವಟಿಕೆಗಳನ್ನು ನಡೆಸುವುದು ಕರ್ನಾಟಕ ಅರಣ್ಯ ಸಂರಕ್ಷಣಾ ಕಾಯಿದೆಯಡಿ ಅಪರಾಧವಾಗಿದೆ. ಈ ಕಾಯಿದೆಯ ಉಲ್ಲಂಘನೆಯ ಹಿನ್ನೆಲೆಯಲ್ಲಿ ಈ ಐವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ.