Cabinet Meeting | ಹು-ದಾ ಮಹಾನಗರ ಪಾಲಿಕೆ ವಿಭಜನೆ ಸೇರಿ ಹಲವು ಮಹತ್ವದ ತೀರ್ಮಾನ

Update: 2025-01-02 14:22 GMT
ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಸಂಪುಟದ ಸಹೋದ್ಯೋಗಿಗಳು

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆ, ಬಸ್ ಪ್ರಯಾಣ ದರ ಏರಿಕೆ ಸೇರಿದಂತೆ ಹಲವು ಮಹತ್ವದ ತೀರ್ಮಾನಗಳನ್ನು ಗುರುವಾರ (ಡಿ. 2) ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳಿಗೆ ಸಂಪುಟ ಒಪ್ಪಿಗೆ ನೀಡಿದೆ.

ಕಳೆದ 10 ವರ್ಷಗಳಿಂದ ಬಿಎಂಟಿಸಿ ಪ್ರಯಾಣ ದರವನ್ನು ಹೆಚ್ಚು ಮಾಡಿರಲಿಲ್ಲ. ಬಿಎಂಟಿಸಿ ಜೊತೆಗೆ ಎಲ್ಲ ಸಾರಿಗೆ ಸಂಸ್ಥೆಗಳ ಪ್ರಯಾಣ ದರವನ್ನು ಶೇ. 15 ರಷ್ಟು ಹೆಚ್ಚಿಸಲು ಸಂಪುಟ ಸಬೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ. ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ, ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜೊತೆಗೆ 4 ಜಿಲ್ಲೆಗಳಲ್ಲಿ ಗೋಶಾಲೆಗಳ ಬಲವರ್ಧನೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. 2022-23 ರಲ್ಲಿ ಘೋಷಣೆಯಾಗಿರುವ ಗೋಶಾಲೆಗಳ ಅನುದಾನವನ್ನು ಹಳೆಯ ಗೋಶಾಲೆಗಳಿಗೆ ಬಳಕೆ ಮಾಡಲು ತಿರ್ಮಾನ ಮಾಡಲಾಗಿದೆ. ಹೀಗಾಗಿ ಒಟ್ಟು 10.84 ಕೋಟಿ ರೂ.ಗಳನ್ನು ಹಳೆಯ ಗೋಶಾಲೆಗಳಿಗೆ ಬಳಕೆ ಮಾಡಲು ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

• ಕೆಐಎಡಿಬಿಯು ಹಣಕಾಸು ಸಂಸ್ಥೆಗಳಿಂದ ಪಡೆಯುವ ಸಾಲದ ಮಿತಿಯನ್ನು 500 ಕೋಟಿಗಳಿಂದ 5000 ಕೋಟಿಗಳಿಗೆ ಹೆಚ್ಚಿಸುವ ಬಗ್ಗೆ ಸಂಪುಟದ ತಿರ್ಮಾನ.

• ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ ನಿವೃತ್ತಿಯಿಂದ ತೆರವಾದ ಪರಿಷತ್ ಸ್ಥಾನಕ್ಕೆ ನಾಮ ನಿರ್ದೇಶನ ಮಾಡಲು ನಿರ್ಧಾರ. ಆ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬೇಕು ಎಂಬ ವಿವೇಚನೆಯನ್ನು ಸಿಎಂ ಸಿದ್ದರಾಮಯ್ಯಗೆ ಬಿಡಲು ಸಂಪುಟದ ತೀರ್ಮಾನ

• ಬಿಬಿಎಂಪಿ ವ್ಯಾಪ್ತಿಯಲ್ಲಿ 2018-19 ಸಾಲಿನಲ್ಲಿ ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದ್ದ 3ನೇ ಹಂತದ ಆಯ್ದ ರಸ್ತೆಗಳ ವೈಟ್ ಟಾಪಿಂಗ್ ಪ್ಯಾಕೇಜ್ 2 ರಿಂದ ರವರೆಗಿನ 6 ಕಾಮಗಾರಿಗಳಿಗೆ ಸಂಬಂಧಿಸಿದ ಆದೇಶಗಳನ್ನು ಹಿಂಪಡೆಯಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

• ಕೇಂದ್ರ ಪುರಸ್ಕೃತ ಯೋಜನೆಯಡಿ ಉಡುಪಿ, ಮೀನುಗಾರಿಕೆ ಹೆಜಮಾಡಿ ಕೋಡಿಯಲ್ಲಿನ ಬಂದರು ನಿರ್ಮಾಣಕ್ಕೆ ಸಂಪುಟದ ಒಪ್ಪಿಗೆ.

• ಕಾಮಗಾರಿಯ 209.13 ಕೋಟಿಗಳ ಪರಿಷ್ಕೃತ ಅಂದಾಜಿಗೆ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ.

• ಶೇ.15 ರಷ್ಟು ಎಲ್ಲ ಸಾರಿಗೆ ಸಂಸ್ಥೆಗಳ ಬಸ್ ದರ ಏರಿಕೆ ಮಾಡಲು ಸಂಪುಟ ಸಭೆ ತಿರ್ಮಾನ. ಕಳೆದ 10 ವರ್ಷದಿಂದ ಬಿಎಂಟಿಸಿ ಪ್ರಯಾಣ ದರ ಏರಿಕೆ ಆಗಿರಲಿಲ್ಲ.

Tags:    

Similar News