ರಾಜಕಾರಣಿಗಳಿಗೆ ಸಿಂಹಸ್ವಪ್ನ: ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನ ನ್ಯಾ. ಸಂತೋಷ ಗಜಾನನ ಭಟ್ ನೀಡಿದ ಪ್ರಮುಖ ತೀರ್ಪುಗಳು
ಕೆ.ಆರ್.ನಗರದ ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಜೀವನ ಪರ್ಯಂತ ಕಾರಾಗೃಹ ಶಿಕ್ಷೆ ವಿಧಿಸಿರುವ ಗಜಾನನ ಭಟ್ ಅವರು ಅಕ್ರಮ ಗಣಿಗಾರಿಕೆ ಪ್ರಕರಣಗಳಲ್ಲಿ ಮಹತ್ವದ ತೀರ್ಪು ನೀಡಿರುವುದು ವಿಶೇಷ.;
ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಭ್ರಷ್ಟ, ಅಪ್ರಮಾಣಿಕ ಜನಪ್ರತಿನಿಧಿಗಳ ಪಾಲಿಗೆ ಸಿಂಹಸ್ವಪ್ನರಾಗಿದ್ದಾರೆ.
ಕೆ.ಆರ್.ನಗರದ ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಜೀವನ ಪರ್ಯಂತ ಕಾರಾಗೃಹ ಶಿಕ್ಷೆ ವಿಧಿಸಿರುವ ಗಜಾನನ ಭಟ್ ಅವರು ಅಕ್ರಮ ಗಣಿಗಾರಿಕೆ ಪ್ರಕರಣಗಳಲ್ಲಿ ಮಹತ್ವದ ತೀರ್ಪು ನೀಡಿರುವುದು ವಿಶೇಷ.
ನ್ಯಾ.ಸಂತೋಷ ಗಜಾನನ ಭಟ್ ನೀಡಿರುವ ತೀರ್ಪುಗಳು
2022 ಸೆ.8 ರಂದು ಮುಡಾ ನಿಧಿ ದುರುಪಯೋಗ ಪ್ರಕರಣದಲ್ಲಿ (ಮಂಡ್ಯ ಅಭಿವೃದ್ಧಿ ಪ್ರಾಧಿಕಾರ) ಎಲ್ಲಾ ಆರೋಪಿಗಳಾದ ಕೆಬ್ಬಳ್ಳಿ ಆನಂದ್, ನಾಗಲಿಂಗಸ್ವಾಮಿ, ಚಂದ್ರಶೇಖರ್, ನಾಗರಾಜ ಮತ್ತು ಹರ್ಷನ್‌ಗೆ ಜೈಲು ಶಿಕ್ಷೆ ವಿಧಿಸಿತ್ತು. ಒಟ್ಟು 5.02 ಕೋಟಿ ರೂ.ದಂಡ ವಿಧಿಸಿದ್ದರು.
2025 ಸೆ.25 ರಂದು ಮೈಸೂರು ಮುಡಾ ಪ್ರಕರಣದಲ್ಲೂ ಜನಪ್ರತಿನಿಧಿಗಳ ನ್ಯಾಯಾಲಯವು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶಿಸಿತ್ತು. ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ನೀಡಿರುವ ಅನುಮತಿ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಇದೇ ಆದೇಶದ ಆಧಾರದ ಮೇಲೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಸಿಎಂ ವಿರುದ್ಧ ತನಿಖೆಗೆ ಆದೇಶಿಸಿದ್ದರು.
2025 ಜುಲೈ 14 ರಂದು ಸ್ಮಾರ್ಟ್ ಮೀಟರ್ ಟೆಂಡರ್ ಪ್ರಕರಣದಲ್ಲಿ ಖಾಸಗಿ ದೂರಿನ ಆಧಾರದ ಮೇಲೆ ಸಚಿವ ಕೆ.ಜೆ. ಜಾರ್ಜ್ ಮತ್ತು ಇತರ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಲೋಕಾಯುಕ್ತರಿಗೆ ಆದೇಶ ನೀಡಿದ್ದರು. ಬಿಜೆಪಿ ಮಾಜಿ ಸಚಿವ ಅಶ್ವತ್ಥ ನಾರಾಯಣ ದೂರು ದಾಖಲಿಸಿದ್ದರು.
ಕಾರವಾರದ ಬೇಲೇಕೇರಿ ಅದಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ 2024 ಅ.26ರಂದು ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮತ್ತು ಇತರರಿಗೆ ಶಿಕ್ಷೆ ಪ್ರಕಟಿಸಿ ತೀರ್ಪು ನೀಡಿದ್ದರು. ಬೇಲೇಕೇರಿ ಅದಿರು ನಾಪತ್ತೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸೈಲ್‌ಗೆ ಏಳು ವರ್ಷ ಶಿಕ್ಷೆ ವಿಧಿಸಿದ್ದರು. ಇನ್ನು ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿ ಪ್ರಕರಣದಲ್ಲಿ ಮಾಜಿ ಸಚಿವ ಆನಂದ್ ಸಿಂಗ್ ಅವರನ್ನು ಖುಲಾಸೆಗೊಳಿಸಿತ್ತು.
2009–10 ರಲ್ಲಿ ಕಾರವಾರ ಮತ್ತು ಬೇಲೇಕೇರಿ ಬಂದರುಗಳಿಂದ ಸುಮಾರು 16,987 ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಅಕ್ರಮವಾಗಿ ರಫ್ತು ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತದ SIT (Special Investigation Team) ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿಗೆ ಸಲ್ಲಿಸಿತ್ತು.
ಇನ್ನು ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಧಾರವಾಡ ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಯೋಗೀಶ್ ಗೌಡ ಕೊಲೆ ಪ್ರಕರಣ, ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕಾರದಪುಡಿ ಮಹೇಶ ಸೇರಿದಂತೆ ಹಲವರು ವಿರುದ್ಧ ಆದೇಶಗಳನ್ನು ಹೊರಡಿಸಿದ್ದರು