ತೆರಿಗೆ ವಂಚನೆ ಆರೋಪದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ, ಪರಿಶೀಲನೆ

ಆದಾಯ ತೆರಿಗೆ ವಂಚನೆ ಆರೋಪದ ಮೇಲೆ ತಮಿಳುನಾಡು ಮೂಲದ ಪ್ರತಿಷ್ಠಿತ ಬಟ್ಟೆ ಶೋ ರೂಮ್‌ಗಳ ಮೇಲೆ ಆದಾಯ ತೆರಿಗೆ ಇಲಾಖೆ (ಇಡಿ) ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.;

Update: 2025-09-12 17:53 GMT

ಆದಾಯ ತೆರಿಗೆ ವಂಚನೆ ಆರೋಪದ ಮೇಲೆ ತಮಿಳುನಾಡು ಮೂಲದ ಪ್ರತಿಷ್ಠಿತ ಬಟ್ಟೆ ಶೋ ರೂಮ್‌ಗಳ ಮೇಲೆ ಆದಾಯ ತೆರಿಗೆ ಇಲಾಖೆ (ಇಡಿ) ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. 

ಬೆಂಗಳೂರಿನ ಕೆ.ಜಿ ರಸ್ತೆ ಮತ್ತು ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿಯಲ್ಲಿರುವ ಎರಡು ಬಟ್ಟೆ ಮಳಿಗೆಗಳ ಮೇಲೆ 25ಕ್ಕೂ ಹೆಚ್ಚಿನ ಐಟಿ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿ ಕಾರ್ಯಾಚರಣೆ ಕೈಗೊಂಡಿದ್ದಾರೆ. ಬೆಳಗ್ಗೆಯಿಂದ ತಡರಾತ್ರಿವರೆಗೆ ಶೋಧ ಕಾರ್ಯ ನಡೆಸಿದ್ದು, ಐಟಿಯಲ್ಲಿ ಸರಿಯಾಗಿ ಪಾವತಿಸದೆ ವಂಚನೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿವೆ.  ತಮಿಳುನಾಡು ಮೂಲದ ಉದ್ಯಮಿಗೆ ಸೇರಿದ್ದಾಗಿದ್ದು, ಪ್ರತಿಷ್ಠಿತ ಬಟ್ಟೆ ಶೋ ರೂಮ್‌ಗಳಾಗಿವೆ ಎಂದು ಐಟಿ ಮೂಲಗಳು ಹೇಳಿವೆ. 

ಬಟ್ಟೆ ಮಳಿಗೆಯಲ್ಲಿ ಆದಾಯ ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ. ಕೆಲವೇ ವರ್ಷಗಳಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆದಿದ್ದ ಬಟ್ಟೆ ಮಳಿಗೆಯು ತಮಿಳುನಾಡು, ಬೆಂಗಳೂರು ಸೇರಿ ಹಲವೆಡೆ ಶಾಖೆಗಳನ್ನು ಹೊಂದಿದ್ದು, ಪ್ರತಿನಿತ್ಯ ಲಕ್ಷಾಂತರ ರೂ. ವ್ಯವಹಾರ ನಡೆಸುತ್ತಿದೆ. ಆದರೂ ಐಟಿ ಪಾವತಿಯಲ್ಲಿ ವಂಚನೆ ಮಾಡಿರುವ ಬಗ್ಗೆ ಮಾಹಿತಿ ಕಲೆಹಾಕಿರುವ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. 

ಬೆಂಗಳೂರು ಮಾತ್ರವಲ್ಲದೇ, ತಮಿಳುನಾಡಿನ ಹಲವೆಡೆ ಸಹ ದಾಳಿ ನಡೆಸಲಾಗಿದೆ. ವಶಕ್ಕೆ ಪಡೆದಿರುವ ದಾಖಲೆಗಳನ್ನು ಪರಿಶೀಲನೆ ನಡೆಸಿದ ಬಳಿಕ ಉದ್ಯಮಿಗೆ ನೊಟೀಸ್‌ ಜಾರಿ ಮಾಡಲಾಗುತ್ತದೆ. ಆದಾಯ ತೆರಿಗೆ ಪಾವತಿಯ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಲಾಗುತ್ತದೆ. ವಿಚಾರಣೆಗೆ ಎಲ್ಲಾ ದಾಖಲೆಗಳನ್ನು ಸಮರ್ಪಕವಾಗಿ ಒದಗಿಸುವಂತೆ ತಿಳಿಸಲಾಗುತ್ತದೆ ಎಂದು ಹೇಳಲಾಗಿದೆ. 


Tags:    

Similar News