ಇಂಡಿಗೋ ವಿಮಾನ ಸೇವೆ ವ್ಯತ್ಯಯ; ಪಿಜಿ ವೈದ್ಯಕೀಯ ಪ್ರವೇಶಕ್ಕೆ ದಿನಾಂಕ ವಿಸ್ತರಣೆ

ಪ್ರವೇಶ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ‌ ಪ್ರವೇಶಕ್ಕೆ ಡಿ.8ರವರೆಗೆ ದಿನಾಂಕ ವಿಸ್ತರಿಸಿದೆ.

Update: 2025-12-07 07:39 GMT

ಸಾಂದರ್ಭಿಕ ಚಿತ್ರ

Click the Play button to listen to article

ಕಳೆದ ಕೆಲವು ದಿನಗಳಿಂದ ದೇಶಿಯ ವಿಮಾನಯಾನದಲ್ಲಿ ಇಂಡಿಗೋ ವಿಮಾನಗಳ ಸಂಚಾರ ವ್ಯತ್ಯಯದಿಂದಾಗಿ ಸಾವಿರಾರು ಪ್ರಯಾಣಿಕರು ಪರದಾಡುವಂತಾಗಿದೆ. ತಮ್ಮ ಮದುವೆ, ಸಮಾರಂಭಗಳನ್ನು ಮುಂದೂಡಿದ್ದ ಕೇಂದ್ರ ಸರ್ಕಾರ ಹಾಗೂ ವಿಮಾನಯಾನ ಸಂಸ್ಥೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂಡಿಗೋ ವಿಮಾನಗಳ ಸಂಚಾರ ರದ್ದು ವಿದ್ಯಾರ್ಥಿಗಳ ಮೇಲೂ ಪರಿಣಾಮ ಬೀರಿದ್ದ, ಪ್ರವೇಶ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ‌ ಪ್ರವೇಶಕ್ಕೆ ಡಿ.8ರವರೆಗೆ ದಿನಾಂಕ ವಿಸ್ತರಿಸಿದೆ. ಅನೇಕ ವಿದ್ಯಾರ್ಥಿಗಳು ಮನವಿ ಮಾಡಿದ ಕಾರಣ ಈ ತೀರ್ಮಾನ ಮಾಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಛಾಯ್ಸ್ ದಾಖಲಿಸಲು ಡಿ.8ರಂದು ಬೆಳಿಗ್ಗೆ 11ಗಂಟೆವರೆಗೆ ಅವಕಾಶ ನೀಡಲಾಗಿದೆ. ಛಾಯ್ಸ್-1 ಹಾಗೂ  2 ದಾಖಲಿಸಿದವರು ಡಿ.8ರಂದು ಮಧ್ಯಾಹ್ನ 12.30ರೊಳಗೆ ಶುಲ್ಕ ಪಾವತಿಸಬೇಕು. ಛಾಯ್ಸ್-1 ಆಯ್ಕೆ ಮಾಡಿದ ಅಭ್ಯರ್ಥಿಗಳು ಡಿ.8ರಂದು  2.30ರವರೆಗೆ ಕೆಇಎ ಕಚೇರಿಯಲ್ಲಿ ಮೂಲ ದಾಖಲೆ ಸಲ್ಲಿಸಬೇಕು. ಮೂಲ ದಾಖಲೆ ಸಲ್ಲಿಸಿದ ನಂತರ ಡಿ.8ರೊಳಗೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಇಂಡಿಗೋ ಸಂಚಾರ ರದ್ದತಿಯಿಂದಾದ ಅವಾಂತರಗಳು

ಸಿಬ್ಬಂದಿ ಕೊರತೆ ಹಾಗೂ ತಾಂತ್ರಿಕ ಕಾರಣದಿಂದ ಕೆಲವು ದಿನಗಳಿಂದ ಇಂಡಿಗೋ ವಿಮಾನಗಳ ಸಂಚಾರ ರದ್ದಾಗಿತ್ತು. ಇದರಿಂದ ಸಾವಿಆರು ಪ್ರಯಾಣಿಕರು ತಮ್ಮ ಊರುಗಳಿಗೆ ಹಾಗೂ ಸಮಾರಂಭಗಳಿಗೆ ತೆರಳಲು ಪರದಾಡುವಂತಾಗಿತ

ಬೆಂಗಳೂರಿನಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ಗಳಾಗಿರುವ ಹುಬ್ಬಳ್ಳಿಯ ಮೇಧಾ ಕ್ಷೀರಸಾಗರ ಹಾಗೂ ಭುವನೇಶ್ವರದ ಸಂಗಮ ದಾಸ್‌ ಪರಸ್ಪರ ಪ್ರೀತಿಸಿ ಕುಟುಂಬದವರ ಒಪ್ಪಿಗೆ ಮೇರೆಗೆ ನ.23ರಂದು ಭುವನೇಶ್ವರದಲ್ಲಿ ಮದುವೆಯಾಗಿದ್ದರು. ಬುಧವಾರ(ಡಿ.3) ಹುಬ್ಬಳ್ಳಿಯಲ್ಲಿ ಆರತಕ್ಷತೆಯ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ವಿಮಾನ ರದ್ದಾದ ಪರಿಣಾಮ ವಧು-ವರರು ಹುಬ್ಬಳ್ಳಿಗೆ ತಲುಪಲು ಸಾಧ್ಯವಾಗಿರಲಿಲ್ಲ.

ಆರತಕ್ಷತೆ ಕಾರ್ಯಕ್ರಮಕ್ಕೆ ಕಲ್ಯಾಣ ಮಂಟಪ ಬುಕ್‌ ಮಾಡಿ, ಅಡುಗೆ ಸೇರಿದಂತೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ವಿಮಾನ ರದ್ದಾದ ಪರಿಣಾಮ ಎನು ಮಾಡಬೇಕೆಂದು ತಿಳಿಯದೇ, ವಧುವಿನ ತಂದೆ-ತಾಯಿಯೇ ವೇದಿಕೆ ಮೇಲೆ ನಿಂತು ಆರತಕ್ಷತೆ ಕಾರ್ಯಕ್ರಮದ ಶಾಸ್ತ್ರ ಮುಗಿಸಿದ್ದು, ನವ ವಧು-ವರರು ಭುವನೇಶ್ವರದಲ್ಲೇ ತಮ್ಮ ಕಾರ್ಯಕ್ರಮವನ್ನು ಆನ್‌ಲೈನ್‌ನಲ್ಲೇ ವೀಕ್ಷಿಸುವಂತಾಗಿದ್ದು, ಸ್ನೇಹಿತರು ಹಾಗೂ ಸಂಬಂಧಿಕರು ಅಲ್ಲಿಂದಲೇ ಆಶೀರ್ವಾದ ಮಾಡಿದ್ದರು.

ವಿಮಾನ ರದ್ದಾಗಿದಕ್ಕೆ, ಮದುವೆಯೂ ರದ್ದು

ಬೆಂಗಳೂರಿನ ವ್ಯಕ್ತಿಯೊಬ್ಬರ ವಿವಾಹ ಒಡಿಶಾದ ಭುವನೇಶ್ವರದಲ್ಲಿ ಶುಕ್ರವಾರ(ಡಿ.5) ನಿಗದಿಯಾಗಿತ್ತು. ಇಂಡಿಗೊ ವಿಮಾನಗಳ ಸಂಚಾರ ವ್ಯತ್ಯಯ ಮತ್ತು ರದ್ದತಿಯಿಂದಾಗಿ ಮದುವೆಯನ್ನೇ ಮುಂದೂಡುವ ಅನಿವಾರ್ಯ ಎದುರಾಗಿದೆ ಎಂದು ವ್ಯಕ್ತಿಯೊಬ್ಬರು ತಿಳಿಸಿದ್ದರು. ಈ ಕುರಿತು ಪ್ರತಿಕ್ರಯಿಸಿದ್ದ ವರನ ತಂದೆ ಮಹೇಶ್, "ಭುವನೇಶ್ವದಲ್ಲಿ ಶುಕ್ರವಾರ(ಡಿ.5) ನಿಗದಿಯಾಗಿದ್ದ ನನ್ನ ಮಗನ ಮದುವೆಗೆ ತೆರಳಲು ಇಂಡಿಗೊ ವಿಮಾನದಲ್ಲಿ ಮುಂಗಡವಾಗಿ 110 ಟಿಕೆಟ್‌ಗಳನ್ನು ಕಾಯ್ದಿರಿಸಿದ್ದೆವು. ಆದರೆ, ಕಳೆದೆರಡು ದಿನಗಳಿಂದ ವಿಮಾನಗಳ ಸಂಚಾರ ವ್ಯತ್ಯಯ ಮತ್ತು ರದ್ದಾಗುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಸಂಚರಿಸಬೇಕಿರುವ ವಿಮಾನ ಸೇವೆ ಲಭ್ಯವಿರಲಿದೆಯೇ ಎಂಬುದನ್ನು ತಿಳಿದುಕೊಳ್ಳಲು ಬಂದಿದ್ದೆ" ಎಂದು ತಿಳಿಸಿದ್ದರು.

Tags:    

Similar News