Pahalgam Terror Attack | ಉಗ್ರರ ದಾಳಿಗೆ ಗುಪ್ತಚರ ಇಲಾಖೆ ವೈಫಲ್ಯ ಕಾರಣ; ಸಿಎಂ ಸಿದ್ದರಾಮಯ್ಯ ಆರೋಪ

ಉಗ್ರರ ದಾಳಿ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಗೂ ಗುಪ್ತಚರ ಮಾಹಿತಿಯ ವೈಫಲ್ಯವೇ ಕಾರಣವಾಗಿತ್ತು ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.;

Update: 2025-04-23 08:53 GMT

ಮುಖ್ಯಮಂತ್ರಿ ಸಿದ್ದರಾಮಯ್ಯ 

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. 

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗುಪ್ತಚರ ಇಲಾಖೆ ಮಾಹಿತಿ ಕೊರತೆಯಿಂದ ದುರಂತ ಸಂಭವಿಸಿದೆ. ಕಾಶ್ಮೀರದಲ್ಲಿ ಸಂತ್ರಸ್ಥರಾಗಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಿದೆ ಎಂದು ಹೇಳಿದ್ದಾರೆ.

ಕಾರ್ಮಿಕ ಸಚಿವರಿಗೆ ಸೂಚನೆ

ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿ ಖಂಡನೀಯ. ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ಹಾಗೂ ಭರತ್ ಭೂಷಣ್ ಮೃತರಾಗಿರುವ ಬಗ್ಗೆ ಸಚಿವ ಸಂತೋಷ್‌ ಲಾಡ್‌ ಅವರು ಮಾಹಿತಿ ನೀಡಿದ್ದಾರೆ. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ವಿಶೇಷ ವಿಮಾನ ವ್ಯವಸ್ಥೆ ಮಾಡಿದ್ದು, ಅದರ ಜವಾಬ್ದಾರಿಯನ್ನು ಸಂತೋಷ್‌ ಲಾಡ್‌ ಅವರಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. 

ಕಾಶ್ಮೀರದ ಪಹಲ್ಗಾಮ್ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿದ್ದು, ಉಗ್ರರ ದಾಳಿ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಗೂ ಗುಪ್ತಚರ ಮಾಹಿತಿಯ ವೈಫಲ್ಯವೇ ಕಾರಣವಾಗಿತ್ತುಉಗ್ರರ ದಾಳಿ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಗೂ ಗುಪ್ತಚರ ಮಾಹಿತಿಯ ವೈಫಲ್ಯವೇ ಕಾರಣವಾಗಿತ್ತ ಎಂದಿದ್ದಾರೆ. ಎಂದಿದ್ದಾರೆ. 

ಕೇಂದ್ರ ಭದ್ರತೆ ಒದಗಿಸಬೇಕು

ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ, ಸಕಾರಾತ್ಮಕವಾಗಿ ಚಿಂತಿಸಿ ಪರಿಶೀಲಿಸಲಿದೆ. ಕೇಂದ್ರ ಸರ್ಕಾರ ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಸಮರ್ಥವಾಗಿ ನಿರ್ವಹಿಸಬೇಕು ಎಂದು ಸಿಎಂ ಅಭಿಪ್ರಾಯಪಟ್ಟರು.

Tags:    

Similar News