Internal Reservation | ಒಳ ಮೀಸಲಾತಿ ಸಮೀಕ್ಷೆ ಅವಧಿ ಜೂ. 8ರವರೆಗೆ ವಿಸ್ತರಿಸಿ ಸರ್ಕಾರ ಆದೇಶ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯ ವಲಯಗಳು ಹಾಗೂ ರಾಜ್ಯದ ವಿವಿಧೆಡೆ ಪರಿಶಿಷ್ಟ ಜಾತಿಯ ಉಪಪಂಗಡಗಳ ಸಮೀಕ್ಷೆ ವಿಳಂಬ ಹಿನ್ನೆಲೆಯಲ್ಲಿ ಮತ್ತೆ ವಿಸ್ತರಿಸಲಾಗಿದೆ.;

Update: 2025-06-01 16:50 GMT

ನ್ಯಾ.ನಾಗಮೋಹನ್‌ ದಾಸ್‌ ನೇತೃತ್ವದಲ್ಲಿ ನಡೆಯುತ್ತಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಅವಧಿಯನ್ನು ಮೂರನೇ ಬಾರಿಗೆ ವಿಸ್ತರಿಸಲಾಗಿದೆ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯ ವಲಯಗಳು ಹಾಗೂ ರಾಜ್ಯದ ವಿವಿಧೆಡೆ ಪರಿಶಿಷ್ಟ ಜಾತಿಯ ಉಪಪಂಗಡಗಳ ಸಮೀಕ್ಷೆ ಕಾರ್ಯವು ಮಳೆಯಿಂದಾಗಿ ವಿಳಂಬವಾಗಿದ್ದು, ದಲಿತ ಸಂಘಟನೆಗಳ ಕೋರಿಕೆಯ ಮೇರೆಗೆ ಸಮೀಕ್ಷಾ ಕಾರ್ಯವನ್ನು ವಿಸ್ತರಿಸಲು ನಿರ್ಣಯಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ವಿಶೇಷ ಶಿಬಿರವನ್ನು ಜೂ. 2ರಿಂದ 8ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು 3 ದಿನಗಳ ಕಾಲ ಅಂದರೆ ಮೇ 30, 31 ಹಾಗೂ ಜೂನ್‌ 1 ರವರೆಗೆ ವಿಸ್ತರಿಸಲಾಗಿತ್ತು.

ಇನ್ನು ಆನ್ ಲೈನ್ ಮೂಲಕ ಸ್ವಯಂ ಘೋಷಣೆ ಅವಧಿಯನ್ನು  ಜೂ. 8ರವರೆಗೆ ಮುಂದುವರಿಸಲು ನಿರ್ಧರಿಸಲಾಗಿದೆ. ಈ ಮೊದಲು ಜೂ.1 ರವರೆಗೆ ವಿಸ್ತರಿಸಲಾಗಿತ್ತು ಎಂದು ಏಕಸದಸ್ಯ ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Similar News