Internal Reservation | ಒಳ ಮೀಸಲಾತಿ ಸಮೀಕ್ಷೆ ಅವಧಿ ಮತ್ತೆ ವಿಸ್ತರಣೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯ ವಲಯಗಳಲ್ಲಿ ಪರಿಶಿಷ್ಟ ಜಾತಿಯ ಉಪಪಂಗಡಗಳ ಸಮೀಕ್ಷೆ ಕಾರ್ಯವು ಮಳೆಯಿಂದಾಗಿ ವಿಳಂಬವಾಗಿದ್ದು, ದಲಿತ ಸಂಘಟನೆಗಳ ಕೋರಿಕೆ ಮೇರೆಗೆ ಸಮೀಕ್ಷಾ ಕಾರ್ಯವನ್ನು ವಿಸ್ತರಿಸಲು ನಿರ್ಣಯಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.;
ನ್ಯಾ.ನಾಗಮೋಹನ್ ದಾಸ್ ನೇತೃತ್ವದಲ್ಲಿ ನಡೆಯುತ್ತಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಅವಧಿಯನ್ನು ಮತ್ತೆ ವಿಸ್ತರಿಸಲಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯ ವಲಯಗಳಲ್ಲಿ ಪರಿಶಿಷ್ಟ ಜಾತಿಯ ಉಪಪಂಗಡಗಳ ಸಮೀಕ್ಷೆ ಕಾರ್ಯವು ಮಳೆಯಿಂದಾಗಿ ವಿಳಂಬವಾಗಿದ್ದು, ದಲಿತ ಸಂಘಟನೆಗಳು ಹಾಗೂ ಬಿಬಿಎಂಪಿ ಕೋರಿಕೆಯ ಮೇರೆಗೆ ಸಮೀಕ್ಷಾ ಕಾರ್ಯವನ್ನು ವಿಸ್ತರಿಸಲು ನಿರ್ಣಯಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಆ ಪ್ರಕಾರ ಮನೆ-ಮನೆ ಭೇಟಿಯ ಸಮೀಕ್ಷೆಯು ಮೇ 26 ರಿಂದ 29 ರವರೆಗೆ ವಿಸ್ತರಿಸಲಾಗಿದೆ. ವಿಶೇಷ ಶಿಬಿರ 3 ದಿನಗಳ ಕಾಲ ಅಂದರೆ ಮೇ 30, 31 ಹಾಗೂ ಜೂನ್ 1 ರವರೆಗೆ ಮರು ನಿಗದಿಪಡಿಸಲಾಗಿದೆ. ಆನ್ ಲೈನ್ ಮೂಲಕ ಸ್ವಯಂ ಘೋಷಣೆ ಅವಧಿಯು ಜೂನ್ 1 ರವರೆಗೆ ಮುಂದುವರೆಯಲಿದೆ ಎಂದು ಏಕಸದಸ್ಯ ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ 17ರಂದು ಒಳಮೀಸಲಾತಿ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿತ್ತು. ಈ ಹಿಂದಿನ ವಿಸ್ತರಣೆಯಂತೆ ಮನೆ ಮನೆ ಭೇಟಿ ಸಮೀಕ್ಷೆ ಮೇ 17 ರಿಂದ 25 ವರೆಗೆ, ಮತಗಟ್ಟೆವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಮೇ 26 ರಿಂದ 28 ರವರೆಗೆ ಹಾಗೂ ಆನ್‌ಲೈನ್ ಮೂಲಕ ಸ್ವಯಂ ಘೋಷಣೆ ಮಾಡುವ ಅವಧಿಯನ್ನು ಮೇ 19 ರಿಂದ ಮೇ 28 ರವರೆಗೆ ವಿಸ್ತರಿಸಿತ್ತು. ಈಗ ಎರಡನೇ ಬಾರಿಗೆ ಸಮೀಕ್ಷೆ ಅವಧಿಯನ್ನು ವಿಸ್ತರಿಸಲಾಗಿದೆ.