ಐಪಿಎಸ್ ಅಧಿಕಾರಿ ಚಂದ್ರಶೇಖರ್ ಒಬ್ಬ ಕ್ರಿಮಿನಲ್, ಬ್ಲ್ಯಾಕ್ ಮೇಲರ್; HD ಕುಮಾರಸ್ವಾಮಿ ಮತ್ತೆ ಕಿಡಿ

ಲೋಕಾಯುಕ್ತರಿಗೆ ರಾಜ್ಯಪಾಲರು ಬರೆದ ಪತ್ರವು ಸರಕಾರಿ ಪ್ರಾಯೋಜಿತ ಒಂದು ನಿರ್ದಿಷ್ಟ ಸುದ್ದಿ ವಾಹಿನಿಗೆ ಸೋರಿಕೆ ಆಗಿತ್ತು. ಅದನ್ನು ಸೋರಿಕೆ ಮಾಡಿದ್ದು ಯಾರು ಎನ್ನುವುದು ಎಲ್ಲರಿಗೂ ಗೊತ್ತಿದೆ.;

Update: 2024-09-29 09:12 GMT

ಲೋಕಾಯುಕ್ತ ಎಸ್‌ಐಟಿ ಐಜಿಪಿ ಎಂ. ಚಂದ್ರಶೇಖರ್ ಒಬ್ಬ ಬ್ಲ್ಯಾಕ್ ಮೇಲರ್, ಕ್ರಿಮಿನಲ್ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಗುಡುಗಿದರು.

ಆತ ತನ್ನ ಸಹೋದ್ಯೋಗಿಗಳಿಗೆ ಬರೆದಿರುವ ಪತ್ರವನ್ನು ಚೆನ್ನಾಗಿ ತಯಾರು ಮಾಡಿದ್ದಾರೆ. ಆ ಪತ್ರವನ್ನು ಯಾರು, ಎಲ್ಲಿ ತಯಾರು ಮಾಡಿಕೊಟ್ಟರು ಎನ್ನುವುದು ನನಗೂ ಚೆನ್ನಾಗಿ ಗೊತ್ತಿದೆ. ಉತ್ತರ ಕೊಡುವ ಜಾಗದಲ್ಲಿ, ಸಂದರ್ಭದಲ್ಲಿ ಇದಕ್ಕೆ ಉತ್ತರ ಕೊಡುತ್ತೇನೆ ಎಂದು ಅವರು ಹೇಳಿದರು.

ಅಧಿಕಾರಿ ತನ್ನ ಸಹೋದ್ಯೋಗಿಗಳಿಗೆ ಬರೆದಿರುವ ಪತ್ರದ ಬಗ್ಗೆ ಭಾನುವಾರ ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಸಚಿವರು ಉತ್ತರಿಸಿದರು

ಆತ ಹೇಳಿರುವಂತೆ ನಾನು ಪ್ರಕರಣದಲ್ಲಿ ಆರೋಪಿ ಇರಬಹುದು. ಆದರೆ, ಆತ ಅಧಿಕಾರಿ ಸೋಗಿನಲ್ಲಿರುವ ಕ್ರಿಮಿನಲ್. ಆತನ ವಿರುದ್ಧ ಸರಣಿ ಅಪರಾಧ ಕೃತ್ಯಗಳನ್ನು ಎಸಗಿರುವ ಆರೋಪಗಳಿವೆ ಎಂದು ಸಚಿವರು ಕಿಡಿಕಾರಿದರು.

ಲೋಕಾಯುಕ್ತರಿಗೆ ರಾಜ್ಯಪಾಲರು ಬರೆದ ಪತ್ರವು ಸರಕಾರಿ ಪ್ರಾಯೋಜಿತ ಒಂದು ನಿರ್ದಿಷ್ಟ ಸುದ್ದಿ ವಾಹಿನಿಗೆ ಸೋರಿಕೆ ಆಗಿತ್ತು. ಅದನ್ನು ಸೋರಿಕೆ ಮಾಡಿದ್ದು ಯಾರು ಎನ್ನುವುದು ಎಲ್ಲರಿಗೂ ಗೊತ್ತಿದೆ. ಆದರೆ, ಅದು ರಾಜಭವನದಿಂದಲೇ ಸೋರಿಕೆ ಆಗಿರಬೇಕೆಂದು ಕಥೆ ಕಟ್ಟಿ, ರಾಜಭವನ ಸಿಬ್ಬಂದಿಯನ್ನೇ ತನಿಖೆ ಮಾಡಬೇಕು, ಅನುಮತಿ ಕೊಡಿ ಎಂದು ಅಧಿಕಾರಿ ಚಂದ್ರಶೇಖರ್ ತನ್ನ ಉನ್ನತ ಅಧಿಕಾರಿಗೆ ಪತ್ರ ಬರೆದಿದ್ದರು. ಹೀಗಾಗಿ ಆ ಅಧಿಕಾರಿಯ ದರ್ಪ ಹಾಗೂ ಆತನ ಹಿನ್ನೆಲೆಯ ಬಗ್ಗೆ ನಾನು ದಾಖಲೆಗಳ ಸಮೇತ ಮಾತನಾಡಿದ್ದೇನೆ ಎಂದು ಸಚಿವರು ಹೇಳಿದರು.

ನನ್ನ ಪ್ರಶ್ನೆಗಳಿಗೆ ಅಧಿಕಾರಿ ಉತ್ತರಿಸಲಿ

ನಾನು ಕೇಳಿರುವ ಪ್ರಶ್ನೆಗಳಿಗೆ ಆತ ಉತ್ತರ ನೀಡಿಲ್ಲ. ಬದಲಿಗೆ ಕ್ರಿಮಿನಲ್ ಮನಃಸ್ಥಿತಿಯ ಕೊಳಕು ಭಾಷೆಯನ್ನು ಬಳಸಿ, ಒಬ್ಬ ಕೇಂದ್ರ ಸಚಿವರ ಬಗ್ಗೆ ಕೆಟ್ಟದ್ದಾಗಿ ಪತ್ರದಲ್ಲಿ ಪದ ಬಳಕೆ ಮಾಡಿದ್ದಾರೆ. ಇದಕ್ಕೆ ಏನು ಮಾಡಬೇಕು, ಎಲ್ಲಿ ಉತ್ತರ ಕೊಡಬೇಕು ಎನ್ನುವುದು ನನಗೆ ಗೊತ್ತಿದೆ ಎಂದು ಅವರು.

Tags:    

Similar News