Hampi Gangrape | ಇಸ್ರೇಲ್ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಮಾಹಿತಿ ಕೋರಿದ ಇಸ್ರೇಲ್ ದೂತಾವಾಸ
ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಗೆ ಭೇಟಿ ನೀಡಿರುವ ಸಿಬ್ಬಂದಿ, ಈ ಕುರಿತಂತೆ ಹೆಚ್ಚಿನ ಮಾಹಿತಿ ಕೋರಿದ್ದಲ್ಲದೇ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.;
ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರ ಕೆರೆಯ ಬಳಿ ಪುರುಷ ಪ್ರವಾಸಿಗರನ್ನು ಕಾಲುವೆಗೆ ನೂಕಿ, ಓರ್ವ ಇಸ್ರೇಲ್ ಮಹಿಳೆ ಹಾಗೂ ಸ್ಥಳೀಯ ಹೋಮ್ ಸ್ಟೇ ನಿರ್ವಾಹಕಿ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣ ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ.
ಇಸ್ರೇಲ್ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ ದಾಖಲಾದ ಬೆನ್ನಲ್ಲೇ ಬೆಂಗಳೂರಿನ ಇಸ್ರೇಲ್ ದೂತಾವಾಸ ಕಚೇರಿ ಸಿಬ್ಬಂದಿ ಘಟನೆ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಗೆ ಭೇಟಿ ನೀಡಿರುವ ಸಿಬ್ಬಂದಿ, ಈ ಕುರಿತಂತೆ ಹೆಚ್ಚಿನ ಮಾಹಿತಿ ಕೋರಿದ್ದಲ್ಲದೇ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರವಾಸಿ ತಾಣ ಹಂಪಿಗೆ ಆಗಮಿಸುವ ವಿದೇಶಿ ಪ್ರವಾಸಿಗರಿಗೆ ಸೂಕ್ತ ರಕ್ಷಣೆ ಇಲ್ಲದಿರುವ ಕುರಿತಂತೆ ಕಳವಳ ವ್ಯಕ್ತಪಡಿಸಿರುವ ದೂತಾವಾಸ ಕಚೇರಿ ಸಿಬ್ಬಂದಿ ಘಟನೆ ಕುರಿತಂತೆ ವಿದೇಶಾಂಗ ಸಚಿವಾಲಯದ ಅಧಿಕಾರಿಗಳ ಗಮನಕ್ಕೆ ತರಲಿದೆ ಎಂದು ತಿಳಿಸಿವೆ.
ಗಂಗಾವತಿ ತಾಲೂಕಿನ ಸಣಾಪುರ ಕೆರೆಯ ದಡದಲ್ಲಿ ಗುರುವಾರ ರಾತ್ರಿ ದುಷ್ಕರ್ಮಿಗಳು 27 ವರ್ಷದ ಇಸ್ರೇಲಿ ಮಹಿಳೆ, ಹೋಂ ಸ್ಟೇಯ 29 ವರ್ಷದ ಮಹಿಳಾ ನಿರ್ವಾಹಕಿ ಮೇಲೆ ಅತ್ಯಾಚಾರ ಎಸಗಿದ್ದರು. ಮಹಿಳೆಯರ ಜೊತೆಗಿದ್ದ ಮೂವರು ಪ್ರವಾಸಿಗರನ್ನು ದುಷ್ಕರ್ಮಿಗಳು ಕಾಲುವೆಗೆ ದೂಡಿ, ಸಾಮೂಹಿಕ ಅತ್ಯಾಚಾರ ನಡೆಸಿದ್ದರು.
ಐವರು ಪ್ರವಾಸಿಗರು ಸಣಾಪುರ ಕೆರೆಯ ಬಳಿ ನಕ್ಷತ್ರಗಳನ್ನು ನೋಡುತ್ತಾ ಗಿಟಾರ್ ನುಡಿಸುತ್ತಾ ಆನಂದಿಸುತ್ತಿದ್ದರು. ಈ ವೇಳೆ ಬೈಕ್ನಲ್ಲಿ ಬಂದ ಮೂವರು ವ್ಯಕ್ತಿಗಳು ಪೆಟ್ರೋಲ್ಗೆ 100 ರೂಪಾಯಿ ನೀಡುವಂತೆ ಹೋಂ ಸ್ಟೇ ನಿರ್ವಾಹಕಿ ಒತ್ತಾಯಿಸಿದ್ದರು. ಹಣ ನೀಡಲು ನಿರಾಕರಿಸಿದಾಗ ದುಷ್ಕರ್ಮಿಗಳು ಪುರುಷ ಪ್ರವಾಸಿಗರ ಮೇಲೆ ಹಲ್ಲೆ ಮಾಡಿ ಕಾಲುವೆಗೆ ದೂರಿ, ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು.
ಕಾಲುವಿಗೆ ದೂಡಿದ್ದ ಮೂವರಲ್ಲಿ ಇಬ್ಬರು ಕಷ್ಟಪಟ್ಟು ಈಜಿ ದಡ ಸೇರಿದ್ದರು. ಒಡಿಶಾದ ಬಿಬಾಸ್ ಎಂಬಾತ ಪತ್ತೆ ಆಗಿರಲಿಲ್ಲ. ಶನಿವಾರ ಒಡಿಶಾ ಮೂಲದ ವ್ಯಕ್ತಿ ಶವ ಪತ್ತೆಯಾಗಿತ್ತು.