ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಒಳಿತು: ನ್ಯಾ. ಸಂತೋಷ್ ಹೆಗ್ಡೆ

ಮುಡಾ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಉಚಿತ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟರು.;

Update: 2024-09-25 11:30 GMT
ನ್ಯಾಯಮೂರ್ತಿ ಸಂತೋಷ್ ಹೆಗ್ಡೆ
Click the Play button to listen to article

ಮುಡಾ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯದ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡ ಅವರು ಪತ್ರಕರ್ತರ ಜೊತೆ ಮಾತನಾಡಿ ಕಾನೂನು ಹೋರಾಟ ಮಾಡಲು ಮುಖ್ಯಮಂತ್ರಿಗೆ ಅವಕಾಶ ಇದೆ. ಆದರೆ ಸಾರ್ವಜನಿಕರ ದೃಷ್ಟಿಯಲ್ಲಿ ರಾಜೀನಾಮೆ ನೀಡುವುದೇ ಸರಿ ಎಂದರು. ಸಿದ್ದರಾಮಯ್ಯ ಅವರು ಅವರು ತಾವೇನೂ ಮಾಡಿಲ್ಲ ಎಂದು ಹೇಳಿದ್ದಾರೆ.

ಆದರೆ ಈಗ ಆರೋಪಗಳಿಗೆ ಸಂಬಂಧಿಸಿ ಪುರಾವೆಗಳು ಇವೆ ಎಂದು ಹೈಕೋರ್ಟ್ ಹೇಳಿದೆ. ಪ್ರಕರಣದ ತನಿಖೆ ಮಾಡುವ ಏಜೆನ್ಸಿ ಯಾವ ನಿರ್ಣಯಕ್ಕೆ ಬರುತ್ತವೆ ಎಂಬುದರ ಮೇಲೆ ಪ್ರಕರಣ ಅಂತ್ಯ ಕಾಣುತ್ತದೆ. ಅದು ಆಮೇಲಿನ ವಿಷಯ. ಆದರೆ ಸದ್ಯ ಗಂಭೀರವಾದ ಆರೋಪ ಬಂದ ಹಿನ್ನೆಲೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಅವರು ಹೇಳಿದರು.

Tags:    

Similar News