ಕಾಂಗ್ರೆಸ್‌ನಿಂದ ಆಫರ್‌ ಬಂದಿದ್ದು ನಿಜ, ಆದರೆ... : ಸದಾನಂದ ಗೌಡ

ಕಾಂಗ್ರೆಸ್‌ನಿಂದ ನನಗೆ ಆಹ್ವಾನ ಕೂಡ ಬಂದಿದೆ. ಯಾವ ಕ್ಷೇತ್ರದಲ್ಲಿ ಬೇಕಾದರೂ ನೀವು ಸ್ಪರ್ಧೆ ಮಾಡಿ ಎಂದು ಕಾಂಗ್ರೆಸ್‌ ಆಫರ್‌ ನೀಡಿದೆ. ಆದರೆ ನನಗೆ ಬಿಜೆಪಿ ಎಲ್ಲವನ್ನು ಕೊಟ್ಟಿದೆ. ಹಾಗಾಗಿ ಕಾಂಗ್ರೆಸ್‌ ಸೇರುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.;

Update: 2024-03-21 06:38 GMT
ಹಾಲಿ ಸಂಸದ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ
Click the Play button to listen to article

ಬೆಂಗಳೂರು: ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ವಂಚಿತರಾಗಿರುವ ಹಾಲಿ ಸಂಸದ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ತಾವು ಕಾಂಗ್ರೆಸ್‌ ಸೇರುವ ಪ್ರಶ್ನೆಯೇ ಇಲ್ಲ ಎಂದು ಹೇಳುವ ಮೂಲಕ ಬಿಜೆಪಿ ತೊರೆಯಲಿದ್ದಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಅವರು ಪಕ್ಷ ಬಿಟ್ಟು ಕಾಂಗ್ರೆಸ್‌ ಸೇರ್ಪಡೆಯಾಗುತ್ತಾರೆ ಎಂಬ ಊಹಾಪೋಹಗಳಿತ್ತು. ಆದರೆ ಗುರುವಾರ(ಮಾ.೨೧) ಬೆಂಗಳೂರಿನ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಈ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಲೋಕಸಭೆ ಚುನಾವಣೆ ಟಿಕೆಟ್‌ ತಪ್ಪಿದಕ್ಕೆ ನನಗೆ ನೋವಾಗಿದೆ. ಕಾಂಗ್ರೆಸ್‌ನಿಂದ ನನಗೆ ಆಹ್ವಾನ ಕೂಡ ಬಂದಿದೆ. ಯಾವ ಕ್ಷೇತ್ರದಲ್ಲಿ ಬೇಕಾದರೂ ನೀವು ಸ್ಪರ್ಧೆ ಮಾಡಿ ಎಂದು ಕಾಂಗ್ರೆಸ್‌ ಆಫರ್‌ ನೀಡಿದೆ. ಆದರೆ ನನಗೆ ಬಿಜೆಪಿ ಎಲ್ಲವನ್ನು ಕೊಟ್ಟಿದೆ. ಹಾಗಾಗಿ ಕಾಂಗ್ರೆಸ್‌ ಸೇರುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಡಿವಿ ಸದಾನಂದ ಗೌಡ ಅವರಿಗೆ ಟಿಕೆಟ್ ಮಿಸ್ ಆಗಿದೆ. ಅವರ ಬದಲಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್‌ ನೀಡಲಾಗಿದ್ದು, ಇದು ಸದಾನಂದ ಗೌಡರ ಅಸಮಾಧಾನಕ್ಕೆ ಕಾರಣವಾಗಿತ್ತು.

Tags:    

Similar News