ಪೋಕ್ಸೋ ಪ್ರಕರಣ | ಯಡಿಯೂರಪ್ಪ ಬೇಗ ಬಂದರೆ ಒಳ್ಳೆಯದು: ಪರಮೇಶ್ವರ್
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಅವರಿಗೆ ವಾರಂಟ್ ಜಾರಿಯಾಗಿದೆ. ಅವರು ಬೇಗ ಬಂದರೆ ಒಳ್ಳೆಯದು. ಇಲ್ಲದಿದ್ರೆ ಅವರನ್ನು ಕರೆದುಕೊಂಡು ಬರುತ್ತಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದರು.;
By : The Federal
Update: 2024-06-14 07:40 GMT
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪನವರಿಗೆ ವಾರಂಟ್ ಜಾರಿಯಾಗಿದೆ. ಅವರು ಬೇಗ ಬಂದರೆ ಒಳ್ಳೆಯದು. ಇಲ್ಲದಿದ್ರೆ ಅವರನ್ನು ಕರೆದುಕೊಂಡು ಬರುತ್ತಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದರು.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಎಸ್ ಯಡಿಯೂರಪ್ಪರಿಂದ ಪ್ರಕರಣ ಸಂಬಂಧ ಪೊಲೀಸರು ಮಾಹಿತಿ ಪಡೆಯಲಿದ್ದಾರೆ. ನಂತರ ಕಾನೂನು ಪ್ರಕಾರವೇ ಕ್ರಮತೆಗೆದುಕೊಳ್ಳುತ್ತಾರೆ. ಯಡಿಯೂರಪ್ಪ ದೆಹಲಿಯಲ್ಲಿ ಇದ್ದಾರೆ ಎನ್ನುತ್ತಿದ್ದಾರೆ. ಸೋಮವಾರ ಬರೋದಾಗಿ ಅವರು ಹೇಳಿದ್ದಾರೆ ಎಂದರು.
ಬಿಜೆಪಿಯವರು ಸೇಡಿನ ರಾಜಕಾರಣ ಎಂದು ಆರೋಪಿಸುತ್ತಾರೆ. ಅವರು ಸುಮ್ಮನೆ ಕಥೆ ಕಟ್ಟುತ್ತಿದ್ದಾರೆ. ಇದರಲ್ಲಿ ರಾಹುಲ್ ಗಾಂಧಿ ಏಕೆ ಭಾಗಿಯಾಗುತ್ತಾರೆ ಹೇಳಿ? ಇದರಲ್ಲಿ ರಾಹುಲ್ ಗಾಂಧಿ ಭಾಗಿ ಆಗಿಲ್ಲ ಎಂದು ಪರಮೇಶ್ವರ್ ತಿಳಿಸಿದರು.