ಗ್ರೇಟರ್ ಬೆಂಗಳೂರು ಫೈಟ್: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ 'ಮಿಷನ್ ಬೆಂಗಳೂರು'

ಫೆಬ್ರವರಿ ಅಥವಾ ಮಾರ್ಚ್ 2026ರಲ್ಲಿ ನಗರ ಪಾಲಿಕೆಗಳಿಗೆ ಚುನಾವಣೆ ನಡೆಯುವ ಸಂಭವವಿರುವ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಒತ್ತು ನೀಡಲು ಈ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

Update: 2025-10-25 13:09 GMT
ಐದು ನಗರ ಪಾಲಿಕೆಗಳ ಚುನಾವಣಾ ಸಿದ್ದತೆಗಾಗಿ ಜೆಡಿಎಸ್‌ ಬಿಡುಗಡೆ ಮಾಡಿರುವ ಪಟ್ಟಿ
Click the Play button to listen to article

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ನೂತನವಾಗಿ ರಚಿಸಲಾಗಿರುವ ಐದು ನಗರ ಪಾಲಿಕೆಗಳ ಮುಂಬರುವ ಚುನಾವಣೆಯ ಸಿದ್ಧತೆಗಾಗಿ ಜೆಡಿಎಸ್ ಉನ್ನತ ಮಟ್ಟದ ಉಸ್ತುವಾರಿ ಸಮಿತಿಯನ್ನು ರಚಿಸಿದ್ದು, ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಶನಿವಾರ ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಫೆಬ್ರವರಿ ಅಥವಾ ಮಾರ್ಚ್ 2026ರಲ್ಲಿ ನಗರ ಪಾಲಿಕೆಗಳಿಗೆ ಚುನಾವಣೆ ನಡೆಯುವ ಸಂಭವವಿರುವ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಒತ್ತು ನೀಡಲು ಈ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಉಸ್ತುವಾರಿ ಸಮಿತಿಯಲ್ಲಿನ ಸದಸ್ಯರು

ಎ. ಮಂಜು, ಶಾಸಕರು, ಅರಕಲಗೂಡು ಶಾಸಕ ಎ. ಮಂಜು, ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ, ವಿಧಾನಪರಿಷತ್‌ ಸದಸದ್ಯರಾದ ಟಿ.ಎ. ಶರವಣ, ಟಿ.ಎನ್. ಜವರಾಯಿಗೌಡ, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ವಿಧಾನಸಭೆ ಮಾಜಿ ಉಪಸಭಾಧ್ಯಕ್ಷ  ಎಂ. ಕೃಷ್ಣಾರೆಡ್ಡಿ, ನಾಗಮಂಗಲ ಮಾಜಿ ಶಾಸಕ ಸುರೇಶ್‌ಗೌಡ, ಮಾಗಡಿ ಮಾಜಿ ಶಾಸಕ ಎ. ಮಂಜುನಾಥ್ ಹಾಗೂ ಕೆ.ಎ. ತಿಪ್ಪೇಸ್ವಾಮಿ ಅವರನ್ನು ನೇಮಿಸಲಾಗಿದೆ.

ಸಮಿತಿಯ ಪ್ರಮುಖ ಐದು ಕಾರ್ಯಗಳು

ವಾರ್ಡ್‌ವಾರು ಉಸ್ತುವಾರಿ ಸಮಿತಿಗಳ ರಚನೆ: ಹೊಸದಾಗಿ ರಚಿತವಾಗಿರುವ ಐದು ನಗರ ಪಾಲಿಕೆಗಳಲ್ಲಿ (ಬೆಂಗಳೂರು ಕೇಂದ್ರ, ಪಶ್ಚಿಮ, ದಕ್ಷಿಣ, ಪೂರ್ವ ಮತ್ತು ಉತ್ತರ) ವಾರ್ಡ್‌ವಾರು ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಪಕ್ಷದ ಮುಖಂಡರು, ನಗರ ಪಾಲಿಕೆ ಮಾಜಿ ಸದಸ್ಯರು ಮತ್ತು ಈ ಹಿಂದೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳನ್ನು ಒಳಗೊಂಡ ಉಸ್ತುವಾರಿ ಸಮಿತಿಗಳನ್ನು ರಚಿಸುವುದು.

ಸದಸ್ಯತ್ವ ನೋಂದಣಿ ಅಭಿಯಾನ: ಪಾಲಿಕೆವಾರು ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮವನ್ನು ರೂಪಿಸಿ, ವಾರ್ಡ್‌ವಾರು ಮತ್ತು ವಿಧಾನಸಭಾ ಕ್ಷೇತ್ರವಾರು ಕಾರ್ಯಕರ್ತರು ಹಾಗೂ ಮುಖಂಡರ ಸಭೆಗಳನ್ನು ಆಯೋಜಿಸುವುದು.

ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ: ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಛಿಸುವ ಆಕಾಂಕ್ಷಿಗಳ ಸಾಮರ್ಥ್ಯವನ್ನು ಆಧರಿಸಿ, ವಾರ್ಡ್‌ವಾರು ಪಕ್ಷದ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿ ಪಕ್ಷದ ರಾಜ್ಯ ಕಚೇರಿಗೆ ಸಲ್ಲಿಸುವುದು.

ಎನ್‌ಡಿಎ ಮೈತ್ರಿಕೂಟದೊಂದಿಗೆ ಸಮನ್ವಯ: ಮುಂಬರುವ ನಗರ ಪಾಲಿಕೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಪಕ್ಷಗಳೊಂದಿಗೆ ಸಮನ್ವಯ ಮತ್ತು ಚುನಾವಣಾ ಹೊಂದಾಣಿಕೆ ಬಗ್ಗೆ ರೂಪುರೇಷೆಗಳನ್ನು ಸಿದ್ಧಪಡಿಸಿ, ರಾಜ್ಯ ಕಚೇರಿಗೆ ಸಲ್ಲಿಸುವುದು.

ಕಾರ್ಯಗಳ ವಿಮರ್ಶೆ: ರಚಿಸಲಾದ ಉಪ-ಸಮಿತಿಗಳ ಕಾರ್ಯಗಳನ್ನು ಕಾಲಕಾಲಕ್ಕೆ ವಿಮರ್ಶಿಸುವುದು.

ಅಕ್ಟೋಬರ್ 16ರಂದು ನಡೆದಿದ್ದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಈ ಸಮಿತಿಯನ್ನು ರಚಿಸಲಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Similar News