ಒಂದು ರಾಷ್ಟ್ರ, ಒಂದು ಚುನಾವಣೆಗೆ ಜೆಡಿಎಸ್ ಸ್ವಾಗತ: HD ಕುಮಾರಸ್ವಾಮಿ

ಒಂದು ರಾಷ್ಟ್ರ, ಒಂದು ಚುನಾವಣೆ ಭಾರತೀಯ ಚುನಾವಣಾ ವ್ಯವಸ್ಥೆ ಸುಧಾರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇರಿಸಿರುವ ಐತಿಹಾಸಿಕ ಹೆಜ್ಜೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಬಣ್ಣಿಸಿದ್ದಾರೆ.;

Update: 2024-09-18 13:14 GMT
ಹೆಚ್‌ ಡಿ ಕುಮಾರಸ್ವಾಮಿ
Click the Play button to listen to article

ಒಂದು ರಾಷ್ಟ್ರ, ಒಂದು ಚುನಾವಣೆ ಭಾರತೀಯ ಚುನಾವಣಾ ವ್ಯವಸ್ಥೆ ಸುಧಾರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇರಿಸಿರುವ ಐತಿಹಾಸಿಕ ಹೆಜ್ಜೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಬಣ್ಣಿಸಿದ್ದಾರೆ.

ಒಂದು ರಾಷ್ಟ್ರ, ಒಂದು ಚುನಾವಣೆ ವ್ಯವಸ್ಥೆಯನ್ನು ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷ ಸ್ವಾಗತಿಸುತ್ತದೆ ಎಂದು ಸಚಿವರು ಇದೇ ವೇಳೆ ತಿಳಿಸಿದರು.

ನವದೆಹಲಿಯ ಭಾರತ್ ಮಂಟಪದಲ್ಲಿ ಭಾರೀ ಕೈಗಾರಿಕೆ ಸಚಿವಾಲಯ ಹಮ್ಮಿಕೊಂಡಿದ್ದ ಎಲೆಕ್ಟ್ರಿಕ್ ವಾಹನಗಳ ಕುರಿತ ಸಭೆಯಲ್ಲಿ ಪಾಲ್ಗೊಂಡ ನಂತರ ಸಚಿವರು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಬಗ್ಗೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿತ್ತು. ಸಮಿತಿ ವರದಿ ನೀಡಿದೆ. ಈ ವರದಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ನರೇಂದ್ರ ಮೋದಿ ಅವರ ಸರ್ಕಾರ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದಂತೆಯೇ ಸಂಪುಟವು ಈ ಐತಿಹಾಸಿಕ ನಿರ್ಧಾರ ಕೈಗೊಂಡಿದೆ ಎಂದು ಅವರು ಹೇಳಿದರು.

Tags:    

Similar News