Jog Falls | ಜೋಗದಲ್ಲಿ ಅಭಿವೃದ್ಧಿ ಕಾಮಗಾರಿ ಪೂರ್ಣ; ಮೇ 1ರಿಂದ ಪ್ರವಾಸಿಗರಿಗೆ ಮುಕ್ತ

ಜೋಗದಲ್ಲಿ ಪ್ರವಾಸಿಗರಿಗೆ ವೀಕ್ಷಣಾ ಗೋಪುರ, ಪಾರ್ಕಿಂಗ್, ಪ್ರವೇಶ ದ್ವಾರ ಸೇರಿದಂತೆ ಇತರೆ ಕಾಮಗಾರಿಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಮೇ 1ರಿಂದ ಜೋಗ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಿದೆ.;

Update: 2025-04-25 09:31 GMT

ಜೋಗ ಜಲಪಾತ

ವಿಶ್ವವಿಖ್ಯಾತ ಜೋಗ ಜಲಪಾತ ಸ್ಥಳದಲ್ಲಿ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಾಲ್ಕು ತಿಂಗಳ ಬಳಿಕ ಪೂರ್ಣಗೊಂಡಿದ್ದು, ಮೇ 1ರಿಂದ ಪ್ರವಾಸಿಗರಿಗೆ ಮುಕ್ತವಾಗಲಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಜೋಗ ಮುಖ್ಯದ್ವಾರ ಹಾಗೂ ಪ್ರವಾಸಿಗರ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಜೋಗ ಜಲಪಾತಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿತ್ತು.  

ವೀಕ್ಷಣಾ ಗೋಪುರ, ಪಾರ್ಕಿಂಗ್, ಪ್ರವೇಶ ದ್ವಾರ ಸೇರಿದಂತೆ ಇತರೆ ಕಾಮಗಾರಿಗಳು ಪೂರ್ಣಗೊಂಡಿದ್ದು, ಈ ಹಿನ್ನೆಲೆಯಲ್ಲಿ ಮೇ 1ರಿಂದ ಜೋಗ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

185ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ

ಜೋಗ ಜಲಪಾತದಲ್ಲಿ ಸುಮಾರು 185 ಕೋಟಿ ರೂ.ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದೆ.  ವೀಕ್ಷಣಾ ಗೋಪುರ, ರೋಪ್ ವೇ, ರೈನ್ ಡ್ಯಾನ್ಸ್, ಗಾರ್ಡನ್, ವಾಣಿಜ್ಯ ಮಳಿಗೆಗಳು, ಉದ್ಯಾನವನ, ಪ್ರವಾಸಿ ಲಾಡ್ಜ್ ಕಾಮಗಾರಿ ಹಾಗೂ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. 

Tags:    

Similar News