ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ

ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರೂ ಆಗಿದ್ದ ಅರ್ಜುನ್ ದೇವ್ ಅವರಿಗೆ 92 ವರ್ಷ ವಯಸ್ಸಾಗಿತ್ತು.;

Update: 2024-04-24 08:40 GMT
ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ
Click the Play button to listen to article

ಬೆಂಗಳೂರು: ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬುಧವಾರ(ಏ.23) ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇಬ್ಬರು ಮಕ್ಕಳನ್ನುಅವರು ಅಗಲಿದ್ದಾರೆ. ಅವರ ಹುಟ್ಟೂರಾದ ಕೋಲಾರ ಜಿಲ್ಲೆ ಚೌಡದೇವನಹಳ್ಳಿಯಲ್ಲಿ ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಅವರು ಸುರ್ಯೋದಯ ಪತ್ರಿಕೆ ಸಂಪಾದಕರಾಗಿಯೂ ಕೆಲಸ ಮಾಡಿದ್ದರು.

ಹಿರಿಯ ಪತ್ರಕರ್ತರಾದ ಅರ್ಜುನ್ ದೇವ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ.

ಪ್ರಜಾವಾಣಿ, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಯಲ್ಲಿ ಸಲ್ಲಿಸಿದ್ದ ಸೇವೆ ಅನನ್ಯವಾದದ್ದು. ಪತ್ರಕರ್ತರ ಸಂಘಟನೆಯಲ್ಲಿ ಅವರಿಗಿದ್ದ ಬದ್ಧತೆ, ಸಮಾಜಮುಖಿಯಾಗಿ ತೊಡಗಿಸಿಕೊಳ್ಳುವ ಪರಿ ನಿಜಕ್ಕೂ ಶ್ಲಾಘನೀಯ. ಸಂಘದ ಅಧ್ಯಕ್ಷರಾಗಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದ ಅರ್ಜುನ್ ದೇವ್ ಅವರ ನಿಧನದಿಂದ ಸುದ್ದಿಮನೆಗೆ ತುಂಬಲಾರದ ನಷ್ಟವಾಗಿದೆ ಎಂದು ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಂತಾಪ ಸೂಚಿಸಿದ್ದಾರೆ.

Tags:    

Similar News