ಕಲಬುರಗಿ: ಕಾರು-ಬೈಕ್ ಮುಖಾಮುಖಿ ಡಿಕ್ಕಿ, ಬೆಂಕಿಗಾಹುತಿಯಾಗಿ ಇಬ್ಬರು ಯುವಕರು ದುರ್ಮರಣ

ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಹೊತ್ತಿ ಉರಿದಿದೆ. ಪರಿಣಾಮವಾಗಿ, ಆಕಾಶ ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಸುಶೀಲ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.

Update: 2025-11-16 05:04 GMT

ಸಾಂದರ್ಭಿಕ ಚಿತ್ರ

Click the Play button to listen to article

ತಾಲೂಕಿನ ಮಹಾಗಾಂವ ಕ್ರಾಸ್ ಬಳಿಯ ರಾಜ್ ಧಾಬಾ ಸಮೀಪ ಶನಿವಾರ ರಾತ್ರಿ ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಸವಾರರು ಸುಟ್ಟು ಕರಕಲಾಗಿದ್ದಾರೆ.

ಕಮಲಾಪುರ ತಾಲೂಕಿನ ಸಿರಗಾಪುರ ಗ್ರಾಮದ ಆಕಾಶ ಚಂದ್ರಕಾಂತ ಧನವಂತ (19) ಹಾಗೂ ಭೂಸಣಗಿ ಗ್ರಾಮದ ಸುಶೀಲ್ ಮಲ್ಲಿಕಾರ್ಜುನ (28) ಮೃತ ಯುವಕರು. ಇವರಿಬ್ಬರು ಬಜಾಜ್ ಎನ್.ಎಸ್. ಬೈಕ್‌ನಲ್ಲಿ ಸಿರಗಾಪುರದಿಂದ ಮಹಾಗಾಂವ ಕ್ರಾಸ್ ಕಡೆಗೆ ತೆರಳುತ್ತಿದ್ದರು. ಈ ವೇಳೆ ಹೈದರಾಬಾದ್‌ನಿಂದ ಕಲಬುರಗಿಗೆ ಬರುತ್ತಿದ್ದ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಹೊತ್ತಿ ಉರಿದಿದೆ. ಪರಿಣಾಮವಾಗಿ, ಆಕಾಶ ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಸುಶೀಲ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪಿಎಸ್‌ಐ ಬಸವರಾಜ ಚಿತ್ತಕೋಟಿ ಹಾಗೂ ಸಿಬ್ಬಂದಿ ಕಿಶನ್ ಜಾಧವ, ರಾಜಶೇಖರ, ಭೀಮಾಶಂಕರ ಅವರು ಸುಶೀಲ್‌ನನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರಾದರೂ, ಅದು ಫಲ ನೀಡಲಿಲ್ಲ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Tags:    

Similar News