ಕಳಸಾ-ಬಂಡೂರಿ ಕಾಮಗಾರಿ| ಕೇಂದ್ರ ವನ್ಯಜೀವಿ ಮಂಡಳಿಯಿಂದ ಕರ್ನಾಟಕ ಪ್ರಸ್ತಾವನೆ ತಿರಸ್ಕಾರ

ರಾಜ್ಯ ವನ್ಯಜೀವಿ ಮಂಡಳಿ ಅನುಮೋದನೆ ನೀಡಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಕೇಂದ್ರ ಸರ್ಕಾರದ ನೇತೃತ್ವದಲ್ಲಿರುವ ರಾಷ್ಟ್ರೀಯ ವನ್ಯಜೀವಿ ಮಂಡಳಿಯು ರಾಜ್ಯ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಗೆ ಅನುಮೋದನೆ ನೀಡದೇ ತಿರಸ್ಕರಿಸಿದೆ

Update: 2024-09-04 11:02 GMT

ಮಹಾದಾಯಿ, ಕಳಸಾ-ಬಂಡೂರಿ ಯೋಜನೆ ಕಾಮಗಾರಿ ಪ್ರಾರಂಭಿಸುವ ರಾಜ್ಯದ ಪ್ರಸ್ತಾವನೆಯನ್ನ  ಕೇಂದ್ರ ಸರ್ಕಾರದ ವನ್ಯಜೀವಿ ಮಂಡಳಿ ತಿರಸ್ಕರಿಸಿದೆ.  ಈ ಬಗ್ಗೆ ತುರ್ತಾಗಿ ಸರ್ವ ಪಕ್ಷ ಸಭೆ ಕರೆಯುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗಿದೆ.

ಈ ಸಂಬಂಧ ನವಲಗುಂದ ಶಾಸಕ ಎನ್. ಎಚ್. ಕೋನರೆಡ್ಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಮನವಿ ಮಾಡಿದ್ದಾರೆ. 

"ಮಹಾದಾಯಿ ಕಳಸಾ-ಬಂಡೂರಿ ಯೋಜನೆ ಜಾರಿ ಮಾಡಲು ಮಹಾದಾಯಿ ನ್ಯಾಯಾಧೀಕರಣ ಐ-ತೀರ್ಪಿನಲ್ಲಿ ಕರ್ನಾಟಕ ರಾಜ್ಯಕ್ಕೆ 13.42 ಟಿಎಂಸಿ ನೀರನ್ನು ಉಪಯೋಗಿಸಲು ಆದೇಶ ನೀಡಿದ ನಂತರ ಸುಪ್ರೀಂಕೋರ್ಟ್ ನಿರ್ದೇಶನದ ಮೆರೆಗೆ ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿದೆ. ಆದರೆ, ಮಹಾದಾಯಿ ನ್ಯಾಯಾಧೀಕರಣ, ಸುಪ್ರೀಂ ಕೋರ್ಟ್ ಆದೇಶ ಸಂಬಂಧ ಭಾರತ ಸರ್ಕಾರ ಅಧಿಸೂಚನೆ ಹೊರಡಿಸಲಾಗಿದೆ. ಈ ಯೋಜನೆಗೆ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ಅರಣ್ಯ ಪ್ರದೇಶವನ್ನು ಬಳಸಿಕೊಳ್ಳಲು ರಾಜ್ಯ ವನ್ಯಜೀವಿ ಮಂಡಳಿ ಅನುಮೋದನೆ ನೀಡಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಕೇಂದ್ರ ಸರ್ಕಾರದ ನೇತೃತ್ವದಲ್ಲಿರುವ ರಾಷ್ಟ್ರೀಯ ವನ್ಯಜೀವಿ ಮಂಡಳಿಯು ರಾಜ್ಯ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಗೆ ಅನುಮೋದನೆ ನೀಡದೇ ತಿರಸ್ಕರಿಸಿದೆ," ಎಂದು ಪತ್ರದಲ್ಲಿ ತಿಳಿಸಲಾಗಿದೆ. ಹೇಳಿದ್ದಾರೆ. 

ಇದಲ್ಲದೇ ರಾಜ್ಯದಿಂದ ಪ್ರಸ್ತಾವನೆಯೇ ಇಲ್ಲದ ಗೋವಾ-ತಮ್ಮಾರ 400 ಕೆ.ವಿ. ಸಾಮರ್ಥ್ಯದ ವಿದ್ಯುತ್ ಯೋಜನೆಗೆ ಷರತ್ತುಬದ್ಧ ಅನುಮತಿ ನೀಡಿ ಉತ್ತರ ಕರ್ನಾಟಕದ ಬಹುದಿನದ ಬೇಡಿಕೆ ಮಹದಾಯಿ, ಕಳಸಾ-ಬಂಡೂರಿ ಜಾರಿ ಮಾಡಲು ಕೇಂದ್ರದ ವನ್ಯಜೀವಿ ಮಂಡಳಿ ತಿರಸ್ಕರಿಸಿದೆ ಎಂದು ಮುಖ್ಯಮಂತ್ರಿ ಗಮನಸೆಳೆಯಲಾಗಿದೆ.


ಉತ್ತರ ಕರ್ನಾಟಕದ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರವೆಂದರೆ ಮಹಾದಾಯಿ ನೀರನ್ನು ಮಲಪ್ರಭಾ ನದಿಗೆ ಸೇರಿಸಿದರೆ 4 ಜಿಲ್ಲೆ, 13 ತಾಲ್ಲೂಕಿನ ನಗರ ಹಾಗೂ ಗ್ರಾಮಗಳಿಗೆ ಕುಡಿಯುವ ನೀರಿಗೆ ಪರಿಹಾರ ಎಂದರೆ ಈ ಯೋಜನೆ. ತಾವು ಈಗಾಗಲೇ ಕಾಮಗಾರಿ ಪ್ರಾರಂಭಿಸಲು ಟೆಂಡ‌ರ್ ಕರೆದು ಕಾರ್ಯಾದೇಶ ನೀಡಲಾಗಿದೆ. ಆದರೆ, ಇತ್ತೀಚೆಗೆ ವನ್ಯಜೀವಿ ಮಂಡಳಿ ತಿರಸ್ಕರಿಸಿದ ನಂತರ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಅನುಮತಿ ಪಡೆಯಲು ಕೂಡಲೇ ಸರ್ವ ಪಕ್ಷದ ಸಭೆ ಕರೆಯಬೇಕೆಂದು ತಮ್ಮಲ್ಲಿ ಈ ಭಾಗದ ಜನತೆಯ ಪರವಾಗಿ ವಿನಂತಿಸಿಕೊಳ್ಳುತ್ತೇನೆ ಎಂದು  ಕೋನರೆಡ್ಡಿ ಪತ್ರದಲ್ಲಿ ತಿಳಿಸಿದ್ದಾರೆ.

Tags:    

Similar News