Pahalgam Terror Attack | ಕನ್ನಡಿಗರ ಮೃತದೇಹ ಬೆಂಗಳೂರಿಗೆ ಆಗಮನ ; ಮತ್ತಿಕೆರೆಯಲ್ಲಿ ಭರತ್ ಭೂಷಣ್ ಅಂತಿಮ ದರ್ಶನ ಪಡೆದ ಸಿಎಂ
ಶಿವಮೊಗ್ಗ ಉದ್ಯಮಿ ಮಂಜುನಾಥ್ ರಾವ್ ಮತ್ತು ಹಾವೇರಿ ಮೂಲದ ಬೆಂಗಳೂರು ನಿವಾಸಿ ಭರತ್ ಭೂಷಣ್ ಪಾರ್ಥಿವ ಶರೀರ ಹೊತ್ತ ವಿಮಾನ ಬೆಳಗಿನ ಜಾವ 3 ಗಂಟೆ ಸುಮಾರಿಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿತು.;
ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಇಬ್ಬರು ಭಯೋತ್ಪಾದಕರ ದಲಿಯಲ್ಲಿ ಮೃತಪಟ್ಟ ಕನ್ನಡಿಗರ ಮೃತದೇಹಗಳನ್ನು ಗುರುವಾರ ಬೆಂಗಳೂರಿಗೆ ತರಲಾಯಿತು.
ಶಿವಮೊಗ್ಗ ಉದ್ಯಮಿ ಮಂಜುನಾಥ್ ರಾವ್ ಮತ್ತು ಹಾವೇರಿ ಮೂಲದ ಬೆಂಗಳೂರು ನಿವಾಸಿ ಭರತ್ ಭೂಷಣ್ ಪಾರ್ಥಿವ ಶರೀರ ಹೊತ್ತ ವಿಮಾನ ಬೆಳಗಿನ ಜಾವ 3 ಗಂಟೆ ಸುಮಾರಿಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿತು.
ಶಿವಮೊಗ್ಗದಿಂದ ಬೆಂಗಳೂರಿಗೆ ಆಗಮಿಸಿದ್ದ ಸಂಬಂಧಿಕರು ವಿಮಾನ ನಿಲ್ದಾಣದಲ್ಲೇ ಎಲ್ಲಾ ಪ್ರಕ್ರಿಯೆ ಮುಗಿಸಿ ಮೃತದೇಹವನ್ನು ಹಸ್ತಾಂತರಿಸಲಾಯಿತು. ಬಳಿಕ ಆ್ಯಂಬುಲೆನ್ಸ್ ಮೂಲಕ ಎಸ್ಕಾರ್ಟ್ ಭದ್ರತೆಯಲ್ಲಿ ಮಂಜುನಾಥ್ ಮೃತದೇಹವನ್ನು ಶಿವಮೊಗ್ಗದತ್ತ ಕಳುಹಿಸಿಕೊಡಲಾಯಿತು.
ಬೆಂಗಳೂರು, ತುಮಕೂರು, ಚಿತ್ರದುರ್ಗ, ಚನ್ನಗಿರಿ ಮೂಲಕ ಶಿವಮೊಗ್ಗಕ್ಕೆ ಮಂಜುನಾಥ್ ಮೃತದೇಹ ತಲುಪಲಿದೆ. ಶಿವಮೊಗ್ಗದ ವಿಜಯನಗರ ಗುತ್ಯಪ್ಪ ಕಾಲೋನಿಯಲ್ಲಿರುವ ಮಂಜುನಾಥ್ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ತುಂಗಾ ನದಿ ದಡದಲ್ಲಿರುವ ರೋಟರಿ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಮಂಜುನಾಥ್ ಅಂತ್ಯಕ್ರಿಯೆ ನೆರವೇರಲಿದೆ. ಇನ್ನು ವರ್ತಕರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟು ಮುಚ್ಚುವ ನಿರ್ಧಾರ ಮಾಡಿದ್ದಾರೆ.
ಇನ್ನು ಹಾವೇರಿ ಮೂಲದ ಭರತ್ ಭೂಷಣ್ ಅವರ ಮೃತದೇಹ ಈಗಾಗಲೇ ಬೆಂಗಳೂರಿನಲ್ಲಿರುವ ಮತ್ತಿಕೆರೆ ನಿವಾಸ ತಲುಪಿದೆ. ಮನೆ ಬಳಿ ಬ್ಯಾರಿಕೇಡ್ ಹಾಕಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರತ್ ಭೂಷಣ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಭಯೋತ್ಪಾದಕರ ದಾಳಿಯಿಂದ ಜೀವ ಕಳೆದುಕೊಂಡವರ ಕನ್ನಡಿಗರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ.