ರಾಜ್‌ಕೋಟ್‌, ದೆಹಲಿ ಅಗ್ನಿ ದುರಂತ| ಎಚ್ಚೆತ್ತ ಸರ್ಕಾರ; ಆಸ್ಪತ್ರೆಗಳು, ಮನರಂಜನಾ ಕೇಂದ್ರಗಳ ಪರಿಶೀಲನೆಗೆ ಸೂಚನೆ

Update: 2024-05-27 05:46 GMT

ರಾಜ್ಯದಲ್ಲಿರುವ ಪ್ರತಿಷ್ಠಿತ ಮಾಲ್ ಗಳು, ಗೇಮಿಂಗ್ ಜೋನ್ ಗಳು, ಮನರಂಜನಾ ಕೇಂದ್ರಗಳಲ್ಲಿ ಅಗ್ನಿ ದುರಂತ ಸೇರಿದಂತೆ ಎಲ್ಲಾ ರೀತಿಯ ಅನಾಹುತ ತಪ್ಪಿಸಲು ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವಂತೆ ರಾಜ್ಯ ಸರ್ಕಾರ ಮಹಾನಗರಪಾಲಿಕೆಗಳ ಆಯುಕ್ತರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.

"ಗುಜರಾತಿನ ರಾಜ್ ಕೋಟ್ ನ ಮನರಂಜನಾ ಕೇಂದ್ರದಲ್ಲಿ ಶನಿವಾರ ಸಂಜೆ ಸಂಭವಿಸಿರುವ ಅಗ್ನಿ ಅವಘಡದಲ್ಲಿ  30 ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಾಗೆಯೇ ದೆಹಲಿ ಆಸ್ಪತ್ರೆಯೊಂದರಲ್ಲಿ ನಡೆದ ಅಗ್ನಿ ಅವಘಡದಲ್ಲಿ ನವಜಾತ 7  ಶಿಶುಗಳು ಮೃತಪಟ್ಟಿವೆ. ಈ ಘಾನೆಗಳು ಅತ್ಯಂತ ಕಳವಳಕಾರಿಯಾಗಿದೆ. ಈ ದುರಂತ ಎಚ್ಚರಿಕೆ ಗಂಟೆಯಾಗಿದ್ದು, ರಾಜ್ಯದ ಬಹುಮಹಡಿ ಆಸ್ಪತ್ರೆಗಳು, ಮಾಲ್ ಹಾಗೂ ಇತರೆ ಜನನಿಬಿಡ ಕೇಂದ್ರಗಳಲ್ಲಿ ಅಗ್ನಿ ದುರಂತ ಸೇರಿದಂತೆ ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆಯೇ ಎಂದು ಸಂಬಂಧಪಟ್ಟ ಅಧಿಕಾರಿಗಳಿಂದ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಲಾಗಿದೆ.

ಈಗಾಗಲೇ ಸೂಚಿಸಿರುವ ರಕ್ಷಣಾ ನಿಯಮಗಳನ್ನು ಪಾಲನೆ ಮಾಡಲಾಗುತ್ತಿದೆಯೇ ಎಂದು ಪರಿಶೀಲಿಸಬೇಕು. ಬೆಂಗಳೂರಿನಲ್ಲಿ ಗುಜರಾತ್ ನಂತಹ ಯಾವುದೇ ದುರ್ಘಟನೆ ನಡೆಯಬಾರದು" ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಹೆಚ್ಚಿನ ಕಡೆ ಅಗ್ನಿಶಾಮಕ ದಳದ ನಿರಕ್ಷೇಪಣಾ ಪತ್ರ ಪಡೆಯದೆ ಕಾರ್ಯ ನಿರ್ವಹಿಸಲಾಗುತ್ತಿದೆಯೇ ಎಂಬುದರ ಬಗ್ಗೆಯೂ ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈಗಾಗಲೇ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್‌ ಅವರು ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಪತ್ರ ಬರೆದಿದ್ದಾರೆ.

Tags:    

Similar News