Karnataka CM : ಸಿಎಂ ಸಚಿವಾಲಯದ 30 ಸಿಬ್ಬಂದಿ ವಜಾ
ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ರಾಮನಗರ, ತುಮಕೂರು, ಬೆಳಗಾವಿ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳ ಸಿಬ್ಬಂದಿ ಸಿಎಂ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು.;
ಬೆಂಗಳೂರು: ಕರ್ನಾಟಕ ಸಿಎಂ ಸಚಿವಾಲಯದಲ್ಲಿ ಕೆಲಸ ಮಾಡುತ್ತಿದ್ದ ಒಟ್ಟು 30 ಸಿಬ್ಬಂದಿಯನ್ನು ತಮ್ಮ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ. ಅವರೆಲ್ಲರೂ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು.
ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ 30 ಸಿಬ್ಬಂದಿಯನ್ನು ಕರ್ತವ್ಯದಿಂದ ತೆಗೆದುಹಾಕಲಾಗಿದೆ. ಗುರುವಾರ ಮಧ್ಯಾಹ್ನದಿಂದಲೇ 30 ಸಿಬ್ಬಂದಿಯನ್ನು ಬಿಡುಗಡೆ ಮಾಡಲಾಗಿದೆ. ಬಿಡುಗಡೆಗೊಂಡವರಲ್ಲಿ ಸರ್ಕಾರದ ಸಹಾಯಕರು, ಕಿರಿಯ ಸಹಾಯಕರು ದಲಾಯತ್ ಹುದ್ದೆಯಲ್ಲಿದ್ದವರು ಇದ್ದಾರೆ.
ಈ ಬಗ್ಗೆ ಸಿಎಂ ಸಚಿವಾಲಯದಿಂದ ಆದೇಶ ಹೊರಡಿಸಲಾಗಿದೆ. 30 ಗುತ್ತಿಗೆ ಸಿಬ್ಬಂದಿಯನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದ್ದು, ಅವರ ಸೇವೆ ಅವಶ್ಯಕತೆ ಇಲ್ಲದ ಕಾರಣ ಕರ್ತವ್ಯದಿಂದ ಏಕಾಏಕಿ ತೆಗೆದುಹಾಕಲಾಗಿದೆ. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ 30 ಸಿಬ್ಬಂದಿಗೆ ನಿನ್ನೆ ಮಧ್ಯಾಹ್ನದಿಂದಲೇ ಕೆಲಸಕ್ಕೆ ಬಾರದಂತೆ ಸೂಚಿಸಲಾಗಿದೆ ಎಂದು ಬರೆಯಲಾಗಿದೆ.
ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ರಾಮನಗರ, ತುಮಕೂರು, ಬೆಳಗಾವಿ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳ ಸಿಬ್ಬಂದಿ ಸಿಎಂ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಅವರಲ್ಲಿ 30 ಜನರನ್ನು ವಜಾಗೊಳಿಸಲಾಗಿದೆ.