ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್‌ : ಡಿ.ಕೆ ಶಿವಕುಮಾರ್‌ ಘೋಷಣೆ

ಈ ಯೋಜನೆಯು ರಾಜ್ಯದಾದ್ಯಂತ ಸಾವಿರಾರು ವಿದ್ಯಾರ್ಥಿಗಳಿಗೆ ಪ್ರಯೋಜನ ನೀಡಲಿದ್ದು,ಶಾಲೆಯಿಂದ ಹೊರಗುಳಿಯುವ ಮಕ್ಕಳ ಸಂಖ್ಯೆಯನ್ನು ಕಡಿಮೆ ಮಾಡಲು ಮತ್ತು ಎಲ್ಲರಿಗೂ ಸಮಾನ ಅವಕಾಶಗಳನ್ನು ಸರ್ಕಾರ ಈ ಯೋಜನೆಯಿಂದ ಕಲ್ಪಿಸಲಿದೆ.;

Update: 2025-07-11 05:01 GMT

ಸರ್ಕಾರಿ ಶಾಲಾ ಮಕ್ಕಳು 

ರಾಜ್ಯ ಸರ್ಕಾರ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್) ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿಯಿಂದ ಪಿಯುಸಿ ವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯವನ್ನು ಘೋಷಿಸಿದೆ. ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಎಕ್ಸ್  ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಡಿಕೆಶಿ ಪೋಸ್ಟ್‌ನಲ್ಲಿ ಏನಿದೆ? 

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು,ʻʻಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಸರ್ಕಾರ ಬದ್ಧ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್‌    ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ ಎಂದು ಪೋಸ್ಟ್‌ ಮಾಡಿದ್ದಾರೆ. 



ಈ ಯೋಜನೆಯು ರಾಜ್ಯದಾದ್ಯಂತ ಸಾವಿರಾರು ವಿದ್ಯಾರ್ಥಿಗಳಿಗೆ ಪ್ರಯೋಜನ ನೀಡಲಿದ್ದು,ಶಾಲೆಯಿಂದ ಹೊರಗುಳಿಯುವ ಮಕ್ಕಳ ಸಂಖ್ಯೆಯನ್ನು ಕಡಿಮೆ ಮಾಡಲು ಮತ್ತು ಎಲ್ಲರಿಗೂ ಸಮಾನ ಅವಕಾಶಗಳನ್ನು ಸರ್ಕಾರ ಈ ಯೋಜನೆಯಿಂದ ಕಲ್ಪಿಸಲಿದೆ. 

Tags:    

Similar News