Naxal Free Karnataka | ನಕ್ಸಲ್ ನಿಗ್ರಹ ಪಡೆ ರದ್ದತಿಯಿಲ್ಲ: ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ಅವರು ʼನಕ್ಸಲ್ ಮುಕ್ತ ಕರ್ನಾಟಕʼ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ಪಡೆಯನ್ನು (ಎಎನ್ಎಫ್) ಮುಂದುವರಿಸಬೇಕಾ ಅಥವಾ ರದ್ದು ಮಾಡಬೇಕಾ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ;
ಆರು ಮಂದಿ ನಕ್ಸಲರ ಶರಣಾಗತಿ ಪೂರ್ಣಗೊಂಡ ಬಳಿಕ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆಯ ಅಗತ್ಯತೆ ಕುರಿತು ಪ್ರಶ್ನೆ ಎದ್ದಿದೆ.
ಸಿಎಂ ಸಿದ್ದರಾಮಯ್ಯ ಅವರು ʼನಕ್ಸಲ್ ಮುಕ್ತ ಕರ್ನಾಟಕʼ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ಪಡೆಯನ್ನು (ಎಎನ್ಎಫ್) ಮುಂದುವರಿಸಬೇಕಾ ಅಥವಾ ರದ್ದು ಮಾಡಬೇಕಾ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ. ಆದರೆ, ನಕ್ಸಲ್ ನಿಗ್ರಹ ಪಡೆ (ANF) ರದ್ದು ಮಾಡುವ ಇರಾದೆ ಸರ್ಕಾರಕ್ಕಿಲ್ಲ ಎನ್ನಲಾಗಿದೆ.
ನಕ್ಸಲ್ ಮುಕ್ತ ಕರ್ನಾಟಕ ಎಂಬ ಘೋಷವಾಕ್ಯವನ್ನು ಮೊಳಗಿಸಿದರೂ, ನಕ್ಸಲ್ ಚಳುವಳಿಯನ್ನು ಸಂಪೂರ್ಣ ನಿಯಂತ್ರಿಸಲು ಸಾಧ್ಯವಿಲ್ಲ ಎನ್ನುವುದು ಪೊಲೀಸರ ಅನಿಸಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಎಎನ್‌ಎಫ್ ರದ್ದು ಸಂಬಂಧ ಪತ್ರಕರ್ತರ ಪ್ರಶ್ನೆಗೆ ಜಾಣತನದ ಉತ್ತರ ನೀಡಿ ನುಣುಚಿಕೊಂಡಿದ್ದಾರೆ.
ಬುಧವಾರ ನಕ್ಸಲರ ಶರಣಾಗತಿ ಪ್ರಕ್ರಿಯೆ ಮುಗಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಕ್ಸಲ್ ಮುಕ್ತ ಸಮಾಜ ನಿರ್ಮಾಣ ನಮ್ಮ ಗುರಿ. ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 12 ಮಂದಿ ನಕ್ಸಲರು ಶರಣಾಗಿದ್ದರು. ಈಗಲೂ ನಮ್ಮದೇ ಸರ್ಕಾರದ ಅವಧಿಯಲ್ಲಿ ಆರು ಮಂದಿ ನಕ್ಸಲರು ಮುಖ್ಯವಾಹಿನಿಗೆ ಬಂದಿದ್ದಾರೆ. ಕರ್ನಾಟಕ ರಾಜ್ಯ ನಕ್ಸಲ್ ಮುಕ್ತವಾಗಿದೆ ಎಂದು ನಾನು ಭಾವಿಸುತ್ತೇನೆ. ಆದರೆ ನಕ್ಸಲ್ ನಿಗ್ರಹ ದಳವನ್ನು ತಕ್ಷಣಕ್ಕೆ ರದ್ದು ಮಾಡುವುದಿಲ್ಲ. ಮುಂದಿನ ಬೆಳವಣಿಗೆಗಳನ್ನು ಗಮನಿಸಿಕೊಂಡು ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ 2005 ರಲ್ಲಿ ನಕ್ಸಲ್ ನಿಗ್ರಹ ದಳ (ಎಎನ್ಎಫ್) ಸ್ಥಾಪನೆ ಮಾಡಲಾಯಿತು. ನಕ್ಸಲ್ ನಾಯಕ ಸಾಕೇತ್ ರಾಜನ್ ಸೇರಿದಂತೆ ಹಲವು ನಾಯಕರ ಎನ್ಕೌಂಟರ್ ಬಳಿಕ ನಕ್ಸಲ್ ಚಟುವಟಿಕೆ ನಿಯಂತ್ರಣಕ್ಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ 2023 ರಲ್ಲಿ ಎಎನ್ಎಫ್ ಸಿಬ್ಬಂದಿಯನ್ನು ಕಡಿತ ಮಾಡಲಾಗಿತ್ತು. ಈಗ ಆರುಮಂದಿ ನಕ್ಸಲರು ಶರಣಾಗಿರುವ ಹಿನ್ನೆಲೆಯಲ್ಲಿ ಎಎನ್ಎಫ್ ರದ್ದುಗೊಳಿಸಲು ಸರ್ಕಾರ ಮುಂದಾಗಿದೆ.
ಅಧಿಕಾರಿಗಳ ಫೋಟೋ ಪೋಸ್
ನಕ್ಸಲರನ್ನು ಶರಣಾಗತಿ ಪ್ರಕ್ರಿಯೆ ಬಳಿಕ ಎಎನ್ಎಫ್ ಅಧಿಕಾರಿಗಳು ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಫೋಸ್ ನೀಡಿದರು.