ರೇಣುಕಾಸ್ವಾಮಿ ಕೊಲೆ ಪ್ರಕರಣ| ಜಾಮೀನು ಪಡೆಯಲು ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್‌

ಹೈಕೋರ್ಟ್‌ನಲ್ಲಿ ಅಕ್ಟೋಬರ್ 22ರಂದು ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನಟ ದರ್ಶನ್ ಪರ ವಾದ ಮಂಡನೆ ಮಾಡಲಿರುವ ವಕೀಲ ಎಸ್.ಸುನೀಲ್ ಅವರು, ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಪೀಠಕ್ಕೆ ಜಾಮೀನು ಅರ್ಜಿಯನ್ನು ಈಗಾಗಲೇ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.;

Update: 2024-10-17 06:20 GMT
ನಟ ದರ್ಶನ್‌
Click the Play button to listen to article

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್ ಅವರ ಜಾಮೀನು ಅರ್ಜಿಯನ್ನು ಅಕ್ಟೋಬರ್ 14 ರಂದು ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಅಕ್ಟೋಬರ್ 22ರಂದು ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನಟ ದರ್ಶನ್ ಪರ ವಾದ ಮಂಡನೆ ಮಾಡಲಿರುವ ವಕೀಲ ಎಸ್.ಸುನೀಲ್ ಅವರು, ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಪೀಠಕ್ಕೆ ಜಾಮೀನು ಅರ್ಜಿಯನ್ನು ಈಗಾಗಲೇ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್ ನ್ಯಾಯಾಲಯವು ಸೋಮವಾರ (ಅಕ್ಟೋಬರ್ 15) ವಜಾಗೊಳಿಸಿತ್ತು. ಆರೋಪಿ ದರ್ಶನ್, ರೇಣುಕಾಸ್ವಾಮಿ ಹಲ್ಲೆ ಹಾಗೂ ಹತ್ಯೆ ವೇಳೆ ಘಟನಾ ಸ್ಥಳದಲ್ಲಿದ್ದರು ಎಂಬುದಕ್ಕೆ ಸಿಡಿಆರ್ (ಫೋನ್‌ ಕರೆಗಳ ದಾಖಲೆ) ಸಾಕ್ಷ್ಯ ಇದೆ. ದರ್ಶನ್ ಡಿಎನ್ಎ ಪರೀಕ್ಷೆಯಿಂದ ಘಟನಾ ಸ್ಥಳದಲ್ಲಿದ್ದರು ಎಂಬುದು ಪತ್ತೆಯಾಗಿದ್ದು, ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ. ಆದ್ದರಿಂದ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಬಾರದೆಂದು ಸರ್ಕಾರಿ ಪರ ವಕೀಲ ಎಸ್ಪಿಪಿ ಪ್ರಸನ್ನ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದರು. ವಾದ-ಪ್ರತಿವಾದವನ್ನು ಆಲಿಸಿದ್ದ 57ನೇ ಸಿಸಿಎಂ ಕೋರ್ಟ್ ನಟ ದರ್ಶನ್ & ಪವಿತ್ರಾ ಗೌಡ ಇಬ್ಬರ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು. ಅದಾದ ಬಳಿಕ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ನಲ್ಲಿ ಅಕ್ಟೋಬರ್ 22ರಂದು ಏನಾಗಲಿದೆ ಎಂದು ಕಾದುನೋಡಬೇಕಿದೆ.

Tags:    

Similar News