ಕರ್ನಾಟಕ ಭ್ರಷ್ಟಾಚಾರದಲ್ಲಿ ನಂ.1:ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ

ಭ್ರಷ್ಟಾಚಾರ ಹೆಚ್ಚಾಗಿರುವುದರಿಂದ ಗುಣಮಟ್ಟದ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಹಿಂದೆ ಐದು-ಆರು ದಶಕಗಳು ನಿಲ್ಲುತ್ತಿದ್ದ ಸರ್ಕಾರಿ ಕಟ್ಟಡಗಳು ಈಗ ಹತ್ತು ವರ್ಷದಲ್ಲೇ ಕುಸಿಯುತ್ತಿವೆ.;

Update: 2025-04-09 04:09 GMT

ಬಸವರಾಜ ರಾಯರಡ್ಡಿ

“ಯಾವುದೇ ಪಕ್ಷದ ಸರ್ಕಾರವಿದ್ದರೂ ಭ್ರಷ್ಟಾಚಾರ ಸಾಮಾನ್ಯ. ಈ ವಿಷಯದಲ್ಲಿ ಕರ್ನಾಟಕವೇ ನಂ. 1 ಸ್ಥಾನದಲ್ಲಿದೆ,” ಎಂದು ಯಲಬುರ್ಗಾ ಶಾಸಕ ಹಾಗೂ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದ್ದಾರೆ. 

ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯು ಮಂಗಳವಾರ ಕೊಪ್ಪಳದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಂವಾದ ಸಭೆಯಲ್ಲಿ ಮಾತನಾಡಿದ ಅವರು, “ಭ್ರಷ್ಟಾಚಾರ ಹೆಚ್ಚಾಗಿರುವುದರಿಂದ  ಗುಣಮಟ್ಟದ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಹಿಂದೆ ಐದು-ಆರು ದಶಕಗಳು ನಿಲ್ಲುತ್ತಿದ್ದ ಸರ್ಕಾರಿ ಕಟ್ಟಡಗಳು ಈಗ ಹತ್ತು ವರ್ಷದಲ್ಲೇ ಕುಸಿಯುತ್ತಿವೆ. ವಿಶೇಷವಾಗಿ ಕಲ್ಯಾಣ ಕರ್ನಾಟಕದಲ್ಲಿ ಈ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ” ಎಂದು ತಿಳಿಸಿದ್ದಾರೆ.

“ಭ್ರಷ್ಟಾಚಾರ ದೊಡ್ಡ ಮಟ್ಟದಲ್ಲಿ ನಡೆಯುತ್ತಿರುವಾಗ ಪ್ರಾದೇಶಿಕ ಅಸಮತೋಲನ ನಿವಾರಣೆ ಸಾಧ್ಯವಿಲ್ಲ. ಜನಪ್ರತಿನಿಧಿಗಳ ನಡತೆಯಂತೆ ಅಧಿಕಾರಿಗಳ ವರ್ತನೆ ಕೂಡಾ ಇರುತ್ತದೆ. ಮುಖ್ಯಮಂತ್ರಿ ಏನೇ ಹೇಳಲಿ, ನಾನು ಭ್ರಷ್ಟಾಚಾರ ಕುರಿತು ಈ ಅಭಿಪ್ರಾಯವನ್ನೇ ಹೊಂದಿದ್ದೇನೆ” ಎಂದು ಅವರು ತಿಳಿಸಿದರು.  

22 ವರ್ಷಗಳಷ್ಟು ಹಳೆಯದಾದ ಡಿ.ಎಂ.ನಂಜುಂಡಪ್ಪ ವರದಿ ಕುರಿತು ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಆರ್ಥಿಕ ತಜ್ಞ ಪ್ರೊ. ಎಂ. ಗೋವಿಂದರಾವ್ ಅಧ್ಯಕ್ಷತೆಯಲ್ಲಿ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ರಚಿಸಿದೆ. ಭ್ರಷ್ಟಾಚಾರದ ಕುರಿತು ಹೇಳಿಕೆಯನ್ನು ನನ್ನ ಹೆಸರನ್ನು ಉಲ್ಲೇಖಿಸಿಯೇ ಶಿಫಾರಸಿನಲ್ಲಿ ಸೇರಿಸಿ' ಎಂದು ಸಮಿತಿಯ ಸದಸ್ಯ ಕಾರ್ಯದರ್ಶಿ ವಿಶಾಲ್ ಆರ್. ಅವರಿಗೆ ಹೇಳಿದರು.

Tags:    

Similar News