ಎಸ್​.ಎಂ. ಕೃಷ್ಣ ಅವರಿಗೆ ಮರಣೋತ್ತರ ʼಕರ್ನಾಟಕ ರತ್ನʼ ಪ್ರಶಸ್ತಿ ನೀಡಲು ಒತ್ತಾಯ

ಎಸ್​.ಎಂ. ಕೃಷ್ಣ ಅವರು ನೀಡಿದ ಅಪಾರ ಸೇವೆ, ಜೀವನ, ಕೊಡುಗೆ ಪರಿಗಣಿಸಿ ಎಸ್‌.ಎಂ.ಕೃಷ್ಣ ಅವರಿಗೆ ಮರಣೋತ್ತರ 'ಕರ್ನಾಟಕ ರತ್ನ' ನೀಡಬೇಕು ಕೂಗು ಎದ್ದಿದೆ.

Update: 2024-12-11 11:57 GMT
ಎಸ್‌ ಎಂ ಕೃಷ್ಣಾ

ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರು ಡಿಸೆಂಬರ್ 10ರಂದು (ಮಂಗಳವಾರ) ಮಧ್ಯರಾತ್ರಿ 2:30ರ ಸುಮಾರಿಗೆ ನಿಧನ ಹೊಂದಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ಇಹಲೋಕ ತ್ಯಜಿಸಿದ್ದಾರೆ. ಬುಧವಾರ ಅವರ ಅಂತ್ಯಕ್ರಿಯೆ ತಮ್ಮ ಹುಟ್ಟೂರು ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ನಡೆದಿದೆ. 

ಇವರ ನಿಧನಕ್ಕೆ ಇಡೀ ರಾಜ್ಯವೇ ಕಂಬನಿ ಮಿಡಿದಿದೆ. ಅವರ ನಿಧನದ ಬೆನ್ನಲ್ಲೇ ಎಸ್‌ಎಂ ಕೃಷ್ಣ ಅವರು ನೀಡಿದ  ಅಪಾರ ಸೇವೆ, ಜೀವನ, ಕೊಡುಗೆ ಪರಿಗಣಿಸಿ ಎಸ್‌.ಎಂ.ಕೃಷ್ಣ ಅವರಿಗೆ ಮರಣೋತ್ತರ 'ಕರ್ನಾಟಕ ರತ್ನ' ನೀಡಬೇಕು ಕೂಗು ಎದ್ದಿದೆ.

ರಾಜಕೀಯದ ವಿವಿಧ ಹಂತಗಳಲ್ಲಿ, ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ ಎಸ್‌.ಎಂ.ಕೃಷ್ಣ ಅವರಿಗೆ ಮರಣೋತ್ತರ 'ಕರ್ನಾಟಕ ರತ್ನ' ನೀಡಬೇಕು ಎಂದು ಬಿಜೆಪಿ ವಿಪಕ್ಷ ನಾಯಕ ಆರ್.ಅಶೋಕ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಿದ ಅವರು, "ಕರ್ನಾಟಕ ರತ್ನ ಎಸ್.ಎಂ.ಕೃಷ್ಣ ಶಾಸಕರಾಗಿ, ಸಚಿವರಾಗಿ, ಸ್ಪೀಕರ್‌, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದರು. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್‌ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ಅಷ್ಟಲ್ಲದೇ ವಿದೇಶಾಂಗ ಸಚಿವರಾಗಿಯು ಎಸ್‌ಎಂ ಕೃಷ್ಣ ಅವರು ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. 

ಎಸ್‌.ಎಂ.ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನʼ (ಮರಣೋತ್ತರ) ನೀಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯ. ಆದ್ದರಿಂದ ತಾವು ಈ ಸಲಹೆಯನ್ನು ಪರಿಗಣಿಸಿ ಶ್ರೀಯುತರಿಗೆ ‘ಕರ್ನಾಟಕ ರತ್ನʼ ನೀಡಿ ಗೌರವ ಸಲ್ಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಮಾಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. 

Tags: