ಆರ್ಸಿಬಿ ಕಾಲ್ತುಳಿತ ಪ್ರಕರಣದಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಜನಸಂದಣಿ ನಿರ್ವಹಿಸಲು '2025ನೇ ಸಾಲಿನ ಕರ್ನಾಟಕ ಜನಸಂದಣಿ ನಿಯಂತ್ರಣ (ಕಾರ್ಯಕ್ರಮಗಳು ಮತ್ತು ಗುಂಪುಗೂಡುವ ಸ್ಥಳಗಳಲ್ಲಿ ಜನಸಂದಣಿಯ ನಿರ್ವಹಣೆ) ವಿಧೇಯಕ'ವನ್ನು ವಿಧಾನಸಭೆಯಲ್ಲಿ ಮಂಡಿಸಿದೆ.ಗೃಹ ಸಚಿವ ಪರಮೇಶ್ವರ್ ಅವರು ಗುರುವಾರ ವಿಧೇಯಕ ಮಂಡಿಸಿ, ಅದರ ಕುರಿತು ಸಮಗ್ರ ವಿವರಣೆ ನೀಡಿದರು.ಬೆಳಗಾವಿ ಅಧಿವೇಶನದ ಸಮಯದಲ್ಲಿ ನಡೆದ ಪ್ರತಿಭಟನೆಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಜಮಾಯಿಸಿದ್ದರಿಂದ ಲಾಠಿ ಚಾರ್ಜ್ ಆಗಿದ್ದನ್ನು ಉಲ್ಲೇಖಿಸಿದ ಪರಮೇಶ್ವರ್, ಕಾನೂನಿನ ಚೌಕಟ್ಟಿನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಪಡೆಯುವುದು ಕಡ್ಡಾಯ ಎಂದು ತಿಳಿಸಿದರು.ಚಿನ್ನಸ್ವಾಮಿ ಕ್ರೀಡಾಂಗಣದ ಘಟನೆ ರಾಜ್ಯವನ್ನು ಬೆಚ್ಚಿ ಬೀಳಿಸಿ ಎಚ್ಚರಿಕೆಯ ಗಂಟೆಯಾಗಿತ್ತು ಎಂದ ಅವರು, ದೇಶದಲ್ಲಿ ಅನೇಕ ಕಾಲ್ತುಳಿತ ಪ್ರಕರಣಗಳು ನಡೆದು ಸಾವು-ನೋವು ಹಾಗೂ ಆಸ್ತಿ ಹಾನಿ ಉಂಟಾಗಿವೆ. ರಾಜ್ಯದಲ್ಲಿ ಇದನ್ನು ತಪ್ಪಿಸಲು ವಿಧೇಯಕ ಜಾರಿ ಅಗತ್ಯವಾಗಿತ್ತು ಎಂದು ಪ್ರತಿಪಾದಿಸಿದರು.ವಿಧೇಯಕದ ಅನ್ವಯ, ಕಾರ್ಯಕ್ರಮದ ಅನುಸಾರ ಸೇರುವ ಜನರ ಸಂಖ್ಯೆ ಆಧರಿಸಿ ಅನುಮತಿ ನೀಡಲಾಗುತ್ತದೆ.ವಿಧೇಯಕದ ಪ್ರಮುಖ ಅಂಶಗಳು17,000ಕ್ಕಿಂತ ಕಡಿಮೆ ಜನ ಸೇರುವ ಕಾರ್ಯಕ್ರಮಕ್ಕೆ ಪೊಲೀಸ್ ಠಾಣೆಯಿಂದ ಅನುಮತಿ ಪಡೆಯಬೇಕು.7,000ದಿಂದ 50,000 ಜನರವರೆಗೆ ಸೇರುವ ಕಾರ್ಯಕ್ರಮಕ್ಕೆ ಡಿವೈಎಸ್ಪಿ ಅನುಮತಿ ಪಡೆಯಬೇಕು.50,000ಕ್ಕಿಂತ ಹೆಚ್ಚು ಜನ ಸೇರುವ ಕಾರ್ಯಕ್ರಮಕ್ಕೆ ಎಸ್ಪಿ ಅವರಿಂದ ಅನುಮತಿ ಕಡ್ಡಾಯ.ಇದೇ ರೀತಿಯ ಕಾರ್ಯಕ್ರಮಗಳ ಆಯೋಜಕರೇ ಘಟನೆಯ ಜವಾಬ್ದಾರಿಯನ್ನು ಹೊರಬೇಕು.50,000ಕ್ಕಿಂತ ಹೆಚ್ಚು ಜನ ಸೇರುವ ಕಾರ್ಯಕ್ರಮಕ್ಕೆ ಆಯೋಜಕರು 1 ಕೋಟಿ ರೂ. ಬಾಂಡ್ ಕೊಡಬೇಕು.ಒಂದು ವೇಳೆ ನಿಯಮಗಳನ್ನು ಪಾಲಿಸದಿದ್ದರೆ ಶಿಕ್ಷೆ ವಿಧಿಸಲು ಅವಕಾಶವಿದೆ.ವದಂತಿ ಹರಡುವವರಿಗೂ ಶಿಕ್ಷೆ ಜಾರಿಯಾಗಲಿದೆ. ವದಂತಿ ಹರಡಿದರೆ ಮೂರು ವರ್ಷಗಳವರೆಗೆ ಶಿಕ್ಷೆ ಮತ್ತು 50,000 ದಂಡ ವಿಧಿಸಬಹುದು.ಪೊಲೀಸರು ಕೂಡ ನಿಯಮಗಳನ್ನು ಪಾಲಿಸದಿದ್ದರೆ ಅವರಿಗೂ ಶಿಕ್ಷೆ ವಿಧಿಸಲಾಗುವುದು.ಯಾವುದೇ ಘಟನೆಯಿಂದ ಪ್ರಾಣಹಾನಿಯಾದರೆ ಕನಿಷ್ಠ 10 ವರ್ಷಗಳ ಶಿಕ್ಷೆಗೆ ಅವಕಾಶವಿದೆ.ಕುಟುಂಬದ ಕಾರ್ಯಕ್ರಮಗಳು ಮದುವೆ, ಖಾಸಗಿ ಸಮಾರಂಭಗಳು ಮತ್ತು ಖಾಸಗಿ ಆವರಣಗಳಲ್ಲಿ ನಡೆಯುವ ಬಾಡಿಗೆ, ಭೋಗ್ಯ, ಗುತ್ತಿಗೆಗೆ ಪಡೆದ ಸ್ಥಳಗಳಲ್ಲಿನ ಕಾರ್ಯಕ್ರಮಗಳಿಗೆ ಈ ನಿಯಮಗಳು ಅನ್ವಯಿಸುವುದಿಲ್ಲ.