ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ಹೊರತಾಗಿಯೂ ರಾಜ್ಯ ಸಾರಿಗೆ ನೌಕರರು ಆರಂಭಿಸಿರುವ ಮುಷ್ಕರದಿಂದಾಗಿ ಬಸ್ ಸಂಚಾರದಲ್ಲಿ ಭಾಗಶಃ ವ್ಯತ್ಯಯ ಉಂಟಾಗಿದೆ. ಕೆಎಸ್ಆರ್ಟಿಸಿ ಬಸ್ಗಳು ರಸ್ತೆಗಿಳಿಯದ ಕಾರಣ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಪ್ರಯಾಣಿಕರು ಪರದಾಡಿದರು. ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಧಾರವಾಡ, ಕಲಬುರಗಿ, ರಾಯಚೂರು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಮುಂತಾದ ನಗರಗಳಲ್ಲಿ ಕೆಎಸ್ಆರ್ಟಿಸಿ ಬಸ್ ಸೇವೆ ಭಾಗಶಃ ಸ್ಥಗಿತಗೊಂಡಿತ್ತು. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.ಮಧ್ಯಾಹ್ನ 1 ಗಂಟೆ ಸುಮಾರಿಗೆ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ಸಂಚಾರದ ಮಾಹಿತಿಯನ್ನು ರಾಜ್ಯ ರಸ್ತೆ ಸಾರಿಗೆ ನಿಗಮ ನೀಡಿದೆ. ಆ ಪ್ರಕಾರ ಕೆಎಸ್ಆರ್ಟಿಸಿ ಬಸ್ಗಳ ಓಡಾಟ ಶೇ 43.9 ರಷ್ಟಿದೆ. ಒಟ್ಟು 4670 ಬಸ್ಗಳ ಪೈಕಿ 2025 ಬಸ್ಗಳು ರಸ್ತೆಗಿಳಿದಿವೆ. ಬಿಎಂಟಿಸಿ ಬಸ್ ಪ್ರಯಾಣ ಪ್ರಮಾಣ ಶೇ 99.8 ರಷ್ಟಿದೆ. 3475 ಬಸ್ಗಳ ಪೈಕಿ 3468 ಬಸ್ಗಳು ಕಾರ್ಯಾಚರಣೆಗೆ ಇಳಿದಿವೆ. ವಾಯವ್ಯ ಸಾರಿಗೆ ನಿಗಮದ 2949 ಬಸ್ಗಳ ಪೈಕಿ 1752 ಬಸ್ಗಳು ರಸ್ತೆಗೆ ಇಳಿದಿದ್ದು, 59.4 ರಷ್ಟಿದೆ. ಕಲ್ಯಾಣ ಕರ್ನಾಟಕದ ಸಾರಿಗೆ ನಿಗಮದಲ್ಲಿ 2691 ಬಸ್ಗಳ ಪೈಕಿ 801 ಬಸ್ಗಳು ರಸ್ತೆಗೆ ಇಳಿದಿದ್ದು, ಶೇ 29.8 ರಷ್ಟು ಬಸ್ಗಳು ಕಾರ್ಯಾಚರಣೆಗೆ ಇಳಿದಿವೆ ಎಂದು ನಿಗಮ ತಿಳಿಸಿದೆ. ಹಲವೆಡೆ ಕಲ್ಲು ತೂರಾಟರಾಜ್ಯದ ಕೊಪ್ಪಳ, ಗದಗ ಹಾಗೂ ಕೋಲಾರ ಜಿಲ್ಲೆಯಲ್ಲಿ ಕೆಎಸ್ಆರ್ಟಿಸಿ ಬಸ್ಗಳ ಮೇಲೆ ಕಲ್ಲು ತೂರಾಟ ನಡೆದಿರುವ ಬಗ್ಗೆ ವರದಿಯಾಗಿದೆ. ಸಾರಿಗೆ ಸಂಘಟನೆಯ ಮುಷ್ಕರ ಕರೆಗೆ ಸ್ಪಂದಿಸದೇ ರಸ್ತೆಗಿಳಿದಿದ್ದ ಬಸ್ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.ಈ ಮಧ್ಯೆ, ಕೆಎಸ್ಆರ್ಟಿಸಿ ಬಸ್ಗಳ ಅಲಭ್ಯತೆಯಿಂದ ಪ್ರಯಾಣಿಕರ ಪರದಾಟ ಮನಗಂಡ ನಿಗಮದ ಅಧಿಕಾರಿಗಳು ಖಾಸಗಿ ಬಸ್ ಹಾಗೂ ಕ್ಯಾಬ್ಗಳ ಮೂಲಕ ಪ್ರಯಾಣಿಕರನ್ನು ಕರೆದೊಯ್ಯಲಾಗುತ್ತಿದೆ. #WATCH | Bengaluru, Karnataka | Security heightened as transport workers of all the four road transport corporations in the state (KSRTC, BMTC, NWKRTC and KKRTC) decided to go on a statewide strike from today to press for their various demands. pic.twitter.com/Gu54VkSiKS— ANI (@ANI) August 5, 2025 ಹೈಕೋರ್ಟ್ ಸೋಮವಾರ ಸಾರಿಗೆ ನೌಕರರ ಮುಷ್ಕರಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದ್ದರೂ, ಕೆಎಸ್ಆರ್ಟಿಸಿ, ಬಿಎಂಟಿಸಿ, ಎನ್ಡಬ್ಲ್ಯೂಕೆಆರ್ಟಿಸಿ ಮತ್ತು ಕೆಕೆಆರ್ಟಿಸಿ ನೌಕರರ ಸಂಘವು ಮುಷ್ಕರ ಆರಂಭಿಸಿದೆ. ಕೆಲವು ಸಿಬ್ಬಂದಿ ಮುಷ್ಕರದಲ್ಲಿ ಭಾಗವಹಿಸದಿರಲು ನಿರ್ಧರಿಸಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಕೆಲ ಬಸ್ಗಳು ಸಂಚರಿಸುತ್ತಿವೆ. ಪರಿಸ್ಥಿತಿ ನಿರ್ವಹಿಸಲು ಸಾರಿಗೆ ನಿಗಮಗಳು ತರಬೇತಿನಿರತ ಬಸ್ ಚಾಲಕರನ್ನು ಕರೆಸಿಕೊಂಡಿವೆ ಎನ್ನಲಾಗಿದೆ. ಚಿಕ್ಕಮಗಳೂರು, ರಾಯಚೂರು, ಚಿತ್ರದುರ್ಗ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಮಂಗಳೂರು ಮತ್ತು ಮೈಸೂರಿನಂತಹ ನಗರಗಳಲ್ಲಿ ಮುಂಜಾನೆ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿತ್ತು. ಬಹುತೇಕ ಪ್ರಯಾಣಿಕರು ನಿಗದಿತ ಸ್ಥಳಗಳಿಗೆ ತೆರಳಲು ಪರ್ಯಾಯ ಮಾರ್ಗ ಹುಡುಕಿಕೊಂಡರು.#WATCH | Hubballi, Karnataka | People face problems as transport workers of all the four road transport corporations in the state (KSRTC, BMTC, NWKRTC and KKRTC) decided to go on a statewide strike from today to press for their various demands. Visuals from Hosur Regional Bus… pic.twitter.com/ExVEn13j79— ANI (@ANI) August 5, 2025 ರಾಜ್ಯ ಸಾರಿಗೆ ನಿಗಮಗಳ ನೌಕರರ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರ ಮತ್ತು ಕಾರ್ಮಿಕ ಸಂಘಟನೆಗಳ ಮುಖಂಡರ ನಡುವೆ ಸೋಮವಾರ ಸಭೆ ನಡೆಸಲಾಗಿತ್ತು. ಆದರೆ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ನಿರಾಕರಿಸಿದ ಹಿನ್ನೆಲೆಯಲ್ಲಿ ಮಂಗಳವಾರದಿಂದ (ಆಗಸ್ಟ್ 5) ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಸಂಘಟನೆಗಳು ಘೋಷಿಸಿದ್ದವು. ಆದರೆ, ಇದಾದ ಕೆಲವೇ ಗಂಟೆಗಳಲ್ಲಿ, ಕರ್ನಾಟಕ ಹೈಕೋರ್ಟ್ ಮುಷ್ಕರಕ್ಕೆ ಮಧ್ಯಂತರ ತಡೆ ನೀಡಿ ಆದೇಶಿಸಿತ್ತು. ಹೈಕೋರ್ಟ್ ಸೂಚನೆಯನ್ನು ಎಲ್ಲರೂ ಪಾಲಿಸಬೇಕು. ನೌಕರರು ನ್ಯಾಯಾಲಯದ ಆದೇಶ ಉಲ್ಲಂಘಿಸಬಹುದೇ? ಅವರು ನ್ಯಾಯಾಲಯಕ್ಕಿಂತ ಮೇಲಿದ್ದಾರೆಯೇ? ರಾಜ್ಯ ಸರ್ಕಾರ ಇದನ್ನು ನ್ಯಾಯಾಲಯದ ಗಮನಕ್ಕೆ ತರುತ್ತದೆ' ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದರು. ಅಲ್ಲದೇ ನಿಗದಿತ ಪ್ರಕಾರ ಸೇವೆಗಳನ್ನು ನೀಡಲು ನಾಲ್ಕು ಆರ್ಟಿಸಿಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದರು. ಪ್ರತಿದಿನ 40 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಾರೆ ಕೆಎಸ್ಆರ್ಟಿಸಿ, ಈಶಾನ್ಯ ಮತ್ತು ವಾಯವ್ಯ ಶಾಖೆಗಳು ಮತ್ತು ಬಿಎಂಟಿಸಿ ಒಟ್ಟಾಗಿ ಪ್ರತಿದಿನ 1.1 ಕೋಟಿಗೂ ಹೆಚ್ಚು ಪ್ರಯಾಣಿಕರಿಗೆ ಸಾರಿಗೆ ಸೌಲಭ್ಯಗಳನ್ನು ಒದಗಿಸುತ್ತವೆ. ಬಿಎಂಟಿಸಿಯಿಂದ ಮಾತ್ರ ಪ್ರತಿದಿನ 40 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಾರೆ.